4ರಂದು ಧಗ್ರಾಯೋ ಕಚೇರಿ ಉದ್ಘಾಟನೆ: ಪೂಜಾರಿ
ಗದಗ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಜಿಲ್ಲಾ ಹಾಗೂ ತಾಲೂಕು ಯೋಜನಾ ಕಚೇರಿಯ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಸಾಧನಾ ಸಮಾವೇಶವನ್ನು ಜು. 4ರಂದು ಬೆಳಗ್ಗೆ 11.20 ಕ್ಕೆ ನಗರದ ಮುಳಗುಂದ ರಸ್ತೆಯಲ್ಲಿರುವ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ. ವೀರೇಂದ್ರ ಹೆಗ್ಗಡೆ ಅಭಿನಂದನಾ ಸಮಿತಿಯ ಅಧ್ಯಕ್ಷ ಬಸಣ್ಣ ಮಲ್ಲಾಡದ ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯವನ್ನು ಜ. ತೋಂಟದ ಡಾ. ಸಿದ್ಧಲಿಂಗ ಶ್ರೀಗಳು ವಹಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು. ಸಂಸದ ಶಿವಕುಮಾರ ಉದಾಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ, ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ, ಎಪಿಎಂಸಿ ಅಧ್ಯಕ್ಷ ಡಿ.ಆರ್. ಪಾಟೀಲ, ಜಿಪಂ ಅಧ್ಯಕ್ಷೆ ಶಾಂತವ್ವ ದಂಡಿನ, ಈಶ್ವರಸಾ ಮೇರವಾಡೆ, ನಗರಸಭೆ ಅಧ್ಯಕ್ಷೆ ರುದ್ರವ್ವ ಕೆರಕಲಮಟ್ಟಿ, ನಗರಸಭೆ ಸದಸ್ಯ ಅನಿಲ ಗರಗ, ಭೂಷಣಕುಮಾರ ಷಾ ಆಗಮಿಸುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಅಂದಾನಪ್ಪ ಪಟ್ಟಣಶೆಟ್ಟಿ, ಶ್ರೀಕಾಂತ ಖಟವಟೆ, ಕೆ. ಸುಧಾಕರ ರಾವ್, ಈಶಣ್ಣ ಮುನವಳ್ಳಿ, ಈಶ್ವರಸಾ ಮೇಹರವಾಡೆ, ಜಯದೇವ ಭಟ್, ಜಯದೇವ ಮೆಣಸಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೈದ್ರಾಬಾದ್ ಕರ್ನಾಟಕ ಪ್ರಾದೇಶಿಕ ವಿಭಾಗದ ನಿರ್ದೇಶಕ ಕೆ. ಬೂದಪ್ಪಗೌಡ್ರ, ಜಿಲ್ಲಾ ನಿರ್ದೇಶಕ ಜಯಂತ ಪೂಜಾರಿ, ಯೋಜನಾಧಿಕಾರಿ ಸಂಜೀವ ನಾಯ್ಕ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

