ಮಗುವಿನ ಪರಿಸ್ಥಿತಿ ಅರಿತು ಬೋಧಿಸಿ: ಇಂಗ್ಲಿಷ್ ಶಿಕ್ಷಕರಿಗೆ ಸಲಹೆ
ಶಿರಹಟ್ಟಿ: ಇಂಗ್ಲಿಷ್ ಭಾಷೆಯ ಬಗ್ಗೆ ಎಲ್ಲರಲ್ಲಿಯೂ ಹೆಚ್ಚು ವ್ಯಾಮೋಹ, ಆಸೆ ಮೂಡಿದ್ದು, ವಿಶ್ವದ ಆಗುಹೋಗುಗಳನ್ನು ತಿಳಿದುಕೊಳ್ಳಲು ಅತ್ಯಂತ ಅವಶ್ಯಕವಾಗಿದೆ. ಸರ್ಕಾರ, ಇಲಾಖೆ ಶಿಕ್ಷಣ ನೀತಿ ಮತ್ತು ಪಠ್ಯಕ್ರಮದಲ್ಲಿ ಆಮುಲಾಗ್ರ ಬದಲಾವಣೆ ಮಾಡಿ ಕ್ರಾಂತಿಯನ್ನೇ ಮಾಡಿದ್ದು, ಮಗುವಿನ ಪರಿಸ್ಥಿತಿ ಅರಿತು ಶಿಕ್ಷಕರು ಬೋಧನೆ ಮಾಡಬೇಕು ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡಗೌಡ್ರ ಕರೆ ನೀಡಿದರು.
ಅವರು ಸೋಮವಾರ ಪಟ್ಟಣದ ಎಂಪಿಎಸ್ ಶಾಲೆಯಲ್ಲಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ರ್ಯಾಲಯ ಶಿರಹಟ್ಟಿ ಸಂಯುಕ್ತವಾಗಿ ಇಂಗ್ಲಿಷ್ ವಿಷಯ ಬೋಧಿಸುವ ಶಿಕ್ಷಕರಿಗೆ ಹೊಸ ಪಠ್ಯಪುಸ್ತಕ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಸೂಚನೆ, ಮಾರ್ಗದರ್ಶನದ ಮೇರೆಗೆ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವುದರಿಂದಲೇ ರಾಜ್ಯದಲ್ಲಿ 18ನೇ ಸ್ಥಾನದಿಂದ 13ನೇ ಸ್ಥಾನಕ್ಕೆ ಫಲಿತಾಂಶ ಬಂದಿದೆ. ಶಿಕ್ಷಣ ಇಲಾಖೆ ಜಿಲ್ಲೆಯಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭದಿಂದಲೇ ಎಲ್ಲ ವಿಷಯಗಳ ಬಗ್ಗೆ ಶಿಕ್ಷಕರಿಗೆ ತರಬೇತಿ ನೀಡುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಇಂಗ್ಲಿಷ್ ವಿಷಯ ಕಷ್ಟಕರ ಎಂದು ಭಾವಿಸದೇ ಶ್ರಮವಹಿಸಿ ಓದಿ ದೇಶದ ಉಜ್ವಲ ಭವಿಷ್ಯ ರೂಪಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ರಾಷ್ಟ್ರೀಯ ಮಾಧ್ಯಮಿಕ ಯೋಜನಾಧಿಕಾರಿ ಯುವರಾಜ ನಾಯಕ, ಎನ್.ಆರ್. ಕುಲಕರ್ಣಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ವೈ.ಎಸ್. ಪಾಟೀಲ, ಪಪಂ ಸದಸ್ಯ ಸಂತೋಷ ಕುರಿ, ಬುಡನಶ್ಯಾ ಮಕಾನದಾರ, ಕೆ.ಎ. ಬಳಿಗೇರ, ಬಿ.ಎಂ. ಚವ್ಹಾಣ, ಜಿ.ಆರ್. ಸರ್ಜಾಪುರ, ಜಿ.ಡಿ. ಈರಕ್ಕನವರ, ಎಂ.ಕೆ. ಲಮಾಣಿ ಉಪಸ್ಥಿತರಿದ್ದರು. ಎಚ್.ಎಫ್. ರೂಕಿ ಸ್ವಾಗತಿಸಿದರು. ರಮೇಶ ನವಲೆ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

