ಬೇಡಿಕೆ: ಪೌರಸೇವಾ ನೌಕರರ ಗಡುವು
ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಜು. 3
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 2-3 ವರ್ಷಗಳಿಂದ ಮನವಿ ಸಲ್ಲಿಸಿದರೂ ಬರೀ ಭರವಸೆ ನೀಡಲಾಗಿದೆ. ಜು. 15ರ ಒಳಗಾಗಿ ಬೇಡಿಕೆ ಈಡೇರಿಸದಿದ್ದಲ್ಲಿ ಜು. 16ರಂದು ಕೆಲಸ ಕಾರ್ಯ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿ ತಾಲೂಕು ಪೌರಸೇವಾ ನೌಕರ ಸಂಘದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪೌರಸೇವಾ ನೌಕರ ಸಂಘದ ಅಧ್ಯಕ್ಷ ಶಿದ್ದಪ್ಪ ಅಮರಾಪುರ ಮಾತನಾಡಿ, ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ವತಿಯಿಂದ ಈ ಹಿಂದೆ ಮನವಿ ನೀಡಿದಾಗ ಪೌರಾಡಳಿತ ಸಚಿವರು, ನಗರಾಭಿವೃದ್ಧಿ ಕಾರ್ಯದರ್ಶಿಗಳು, ಪೌರಾಡಳಿತ ನಿರ್ದೇಶಕರು ಹಾಗೂ ಉನ್ನತ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರಿಂದ ಮುಷ್ಕರ ಹಿಂಪಡೆಯಲಾಗಿತ್ತು. ಇಲ್ಲಿಯವರೆಗೂ ಭರವಸೆ ಈಡೇರದ ಕಾರಣ ಮೊದಲನೇ ಹಂತವಾಗಿ ಹಬ್ಬ, ಹರಿದಿನಗಳು ಹಾಗೂ ರಜೆ ದಿನಗಳಲ್ಲಿ ನೈರ್ಮಲ್ಯ ಕೆಲಸ, ನೀರು ಸರಬರಾಜನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಹಬ್ಬದ ರಜೆ ದಿನಗಳಲ್ಲಿ ಕೆಲಸ ಮಾಡುವ ನೌಕರರಿಗೆ 15 ದಿನಗಳ ಬದಲಾಗಿ 30 ದಿನಗಳಿಗೆ ವಿಶೇಷ ವೇತನ, ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ರು. 2 ಸಾವಿರ ಬದಲಾಗಿ ರು. 5ಸಾವಿರ ವಿಶೇಷ ಭತ್ಯೆ ನೀಡಬೇಕು. 6ನೇ ವೇತನದ ರೀತಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು. ಪೌರ ಕಾರ್ಮಿಕರಿಗೆ ಶೇ. 22,75ರ ಅಡಿಯಲ್ಲಿ ಬೆಳಗಿನ ಉಪಾಹಾರ ನೀಡುವುದು. ಸ್ಥಳೀಯ ಸಂಸ್ಥೆಗಳ ನಿವೃತ್ತ ನೌಕರರಿಗೆ ತುಟ್ಟಿಭತ್ಯೆ, ಪರಿಷ್ಕೃತ ವೇತನದ ಪ್ರತ್ಯೇಕ ಆದೇಶ ಹೊರಡಿಸುವುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. ಮೊದಲು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಕೆಗೆ ಪೌರಸೇವಾ ನೌಕರರು ಘೋಷಣೆ ಕೂಗಿದರು. ನಂತರ ತಹಸೀಲ್ದಾರ್ ಗಾಳಿ ಕೊಟ್ರೇಶ್ವರಗೆ ಮನವಿ ನೀಡಿದರು. ಬೇಡಿಕೆ ಈಡೇರಿಕೆಯ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಹಸೀಲ್ದಾರ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

