ಕೊಳಚೆ ಪ್ರದೇಶಾಭಿವೃದ್ಧಿಗೆ ಸ್ಲಂ ಜನಾಂದೋಲನ ಸಮಿತಿ ಕಾರ್ಯಕರ್ತರು ಶ್ರಮಿಸಬೇಕು: ನರಸಿಂಹಮೂರ್ತಿ ಸಲಹೆ
ಗದಗ: ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಮಿತಿ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಕರೆ ನೀಡಿದರು.
ಅವರು ಗುರುವಾರ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಸತಿರಹಿತರ ಸಮಾಲೋಚನೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಸ್ಲಂ ನಿವಾಸಿಗಳು ಕನಿಷ್ಠ ಸೌಲಭ್ಯವಿಲ್ಲದೇ ಗುಡಿಸಲುಗಳಲ್ಲಿ ಹೀನಾಯ ಬದುಕು ನಡೆಸುತ್ತಿದ್ದು, ರಾಜ್ಯ ಸರ್ಕಾರ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇಂದು ರಾಜ್ಯದಲ್ಲಿ ಲಕ್ಷಾಂತರ ಬಡಕುಟುಂಬಗಳು ಬೀದಿಗಳಲ್ಲಿ, ಗುಡಿಸಲಗಳಲ್ಲಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವ ಸ್ಥಿತಿ ನಿರ್ಮಾಣವಾಗಿದೆ, ಆದ್ದರಿಂದ ಸಂಘಟನೆಯ ಕಾರ್ಯಕರ್ತರು ತಮ್ಮ ನಗರದ ಕೊಳಚೆ ಪ್ರದೇಶಗಳ ಸಮಸ್ಯೆಗಳಿಗೆ ಗಮನ ನೀಡಿ ಪ್ರದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕಾಗಿದ್ದು, ನಮ್ಮ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ ಜನರಿಗೆ ಮಾಹಿತಿ ನೀಡಿ ವ್ಯವಸ್ಥೆ ವಿರುದ್ಧ ನಮ್ಮ ಚಳವಳಿಗಳನ್ನು ಕಟ್ಟಬೇಕಾಗಿದೆ. ರಾಜ್ಯ ಸರ್ಕಾರ ರಾಜ್ಯದ ಬಡಜನರಿಗಾಗಿ ಲಕ್ಷಾಂತರ ಮನೆಗಳನ್ನು ಕಟ್ಟಿ ಕೊಡುತ್ತೇವೆ ಎಂದು ಹೇಳುತ್ತಿದೆ. ಆದರೆ ಈವರೆಗೊ ವಸತಿರಹಿತರ ಸಮೀಕ್ಷೆ ನಡೆಸಲು ಆದೇಶ ನೀಡಿಲ್ಲ. ಇಲ್ಲವಾದರೆ ಪ್ರತಿಭಟನೆ ನಡೆಸಲು ವಸತಿರಹಿತರು ಸಿದ್ಧರಾಗಬೇಕು ಎಂದರು. ಸಾವಿತ್ರಿಬಾಯಿ ಪುಲೆ ಮಹಿಳಾ ಸಮಿತಿಯ ರಾಜ್ಯ ಸಂಚಾಲಕಿ ಚಂದ್ರಮ್ಮ ಮಾತನಾಡಿದರು. ಸ್ಲಂ ಸಮಿತಿ ಅಧ್ಯಕ್ಷ ಅಶೋಕ ಮ್ಯಾಗೇರಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಮಿತಿ ಅಧ್ಯಕ್ಷೆ ಉಮಾದೇವಿ ಕಾತರಕಿ, ತಿಪ್ಪವ್ವ ಮುಟಗಾರ, ಅಶೋಕ ಕುಸಬಿ. ಆರತಿ ಎನ್, ಪರವೀನ ಬಡಿಗೇರ, ಇಬ್ರಾಹಿಂ ಮುಲ್ಲಾ, ಡಾಲಾಯತ, ಪರಶುರಾಮ ಕಾಳೆ, ಅಬುಬಕರ ಮಕಾನದಾರ, ಅನೀಲ ಕಾಳೆ, ಶಹಜಾನಬಿ ಕರ್ನಾಚಿ, ಬಸವರಾಜ ಬಿಳೆಯಲಿ, ಬಾಬುಸಾಬ ಅಗಡಿ, ಶಂಕ್ರಪ್ಪ ಹದ್ಲಿ, ನಾಗರಾಜ ಮುಟಗಾರ, ಕಮಲಾ ಬಿದರೂರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

