ಗದಗ

2018ಕ್ಕೆ ಬಯಲು ಬಹಿರ್ದೆಸೆ ಮುಕ್ತ ರಾಜ್ಯ ನಿರ್ಮಾಣ

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 5
2018ಕ್ಕೆ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿ ನಿರ್ಮಾಣ ಮಾಡಲು ಸರ್ಕಾರ ಸಂಕಲ್ಪ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ತಾಲೂಕಿನ ಮುಳಗುಂದ ಗ್ರಾಮದಲ್ಲಿ ಪ್ರವಾಹದಲ್ಲಿ ಕೊಚ್ಚಿಹೋದ ಮಹಿಳೆಗೆ ಪರಿಹಾರದ ಚೆಕ್ ವಿತರಣೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿರುವ ಬಯಲು ಶೌಚಾಲಯ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದ್ದು, 40 ಲಕ್ಷ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸಾಮೂಹಿಕ ಶೌಚಾಲಯಗಳ ಸಮುಚ್ಚಯಗಳ ನಿರ್ಮಾಣ ಮಾಡಲು ಸ್ಥಳ ಪರಿಶೀಲಿಸುತ್ತಿದ್ದು, ಮೊದಲ ಹಂತವಾಗಿ 1 ಸಾವಿರ ಈ ರೀತಿಯ ಶೌಚಾಲಯ ಸಮುಚ್ಚಯ ನಿರ್ಮಿಸಲಾಗುವುದು ಎಂದರು.
ಗ್ರಾಮ ಕೋಶ ಯೋಜನೆ
ರಾಜ್ಯದಲ್ಲಿ ಸ್ಥಾಪನೆಯಾಗಿರುವ ಜನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ರಾಜ್ಯದಲ್ಲಿರುವ 59 ಸಾವಿರ ಜನ ವಸತಿ ಪ್ರದೇಶಗಳ ಬಗ್ಗೆ ಸಮಗ್ರವಾದ ಮಾಹಿತಿ ಸಂಗ್ರಹಿಸಿ, ಅವುಗಳು ರಾಜ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆಯೂ ಅಗತ್ಯ ಮಾಹಿತಿ ಸಂಗ್ರಹಿಸುವ ಗ್ರಾಮ ಚರಿತ್ರೆ ಕೋಶ ಎನ್ನುವ ವಿಶೇಷ ಯೋಜನೆ ಜಾರಿಗೆ ತಂದಿದೆ.
 ಇದಕ್ಕಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಜನಪದ ವಿವಿಗೆ ರು. 2 ಕೋಟಿ ಬಿಡುಗಡೆ ಮಾಡಲಾಗಿದೆ. ಗ್ರಾಮೀಣ ಜನರು ದೇಶ ರಾಜ್ಯಕ್ಕೆ ನೀಡಿರುವ ಕೊಡುಗೆ ಕುರಿತು ಮಾಹಿತಿ ದಾಖಲಿಸುವ ಬೃಹತ್ ಯೋಜನೆ ಇದಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.