ಗದಗ

ಅನರ್ಹರಿಗೆ ಸೂರು: ಆಕ್ಷೇಪ

Published On :

ರೋಣ: ಇಂದಿರಾ, ಬಸವ, ಅಂಬೇಡ್ಕರ್ ವಸತಿ ಯೋಜನೆಗಳು ಹೆಚ್ಚಾಗಿ ಅನರ್ಹರ ಪಾಲಾಗಿದ್ದು, ಇದರಿಂದ ನಿರ್ಗತಿಕರಿಗೆ, ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ತಾಲೂಕಿನ ಕುರಹಟ್ಟಿ ಗ್ರಾಮಸ್ಥರು ಶನಿವಾರ ಗ್ರಾಮ ಪಂಚಾಯಿತಿ ಆವರಣದಲ್ಲಿ ಜರುಗಿದ ಮಟ್ಟದ ಜನಸ್ಪಂದನ ಸಭೆಯಲ್ಲಿ ಆರೋಪಿಸಿದರು.  ಕುರಹಟ್ಟಿ ಗ್ರಾಮದಲ್ಲಿ ಸುಮಾರು 20 ರಿಂದ 30 ಎಕರೆ ಇದ್ದವರೇ ಹೆಚ್ಚಾಗಿ ಪಡೆದುಕೊಂಡಿದ್ದಾರೆ. ಈ ಹಿಂದೆ ಇದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಮತ್ತು ತಾ.ಪಂ. ಅಭಿಯಂತರ ಯೋಜನೆ ದುರ್ಬಳಕೆಯಲ್ಲಿ ಭಾಗಿಯಾಗಿದ್ದು, ಈ ಕುರಿತು ಸೂಕ್ತ ತನಿಖೆ ಕೈಗೊಂಡು, ಅರ್ಹರಿಗೆ ಯೋಜನೆಯ ಪ್ರಯೋಜನ ದೊರಕಿಸಿಕೊಡಬೇಕು ಎಂದು ಗ್ರಾಮಸ್ಥರಾದ ಮುದಿಗೌಡ ಪಾಟೀಲ, ಮಲ್ಲಪ್ಪ ಮಡಿವಾಳರ, ಶಂಕ್ರಪ್ಪ ಜೀಗೇರಿ ಒತ್ತಾಯಿಸಿದರು.  ಸಭೆಯಲ್ಲಿ ತಾ.ಪಂ. ಗ್ರಾಮಾಭಿವೃದ್ಧಿ ಸಹಾಯಕ ನಿರ್ದೇಶಕರಾದ ಆರ್.ಎನ್. ಬಿರನೂರ ಮಾತನಾಡಿ,  ಅನರ್ಹರರಿಗೆ ಮನೆ ಕೊಟ್ಟಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ವಸತಿ ಯೋಜನೆಯ ಆಯ್ಕೆಯಲ್ಲಿ ಗ್ರಾಮಸಭೆ ನಡೆಸದೇ ಗ್ರಾ.ಪಂ. ಅಧಿಕಾರಿಗಳೇ ಆಯ್ಕೆ ಮಾಡುತ್ತಾರೆ ಎಂದು ಗ್ರಾಮದ ದಲಿತ ಮುಖಂಡ ಮಜುರಪ್ಪ ಶಾಂತಗೇರಿ ಆರೋಪಿಸಿದರು. ಕೆಲ ಹೊತ್ತು ಅಧಿಕಾರಿಗಳ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಜರುಗಿತು. ಆಗ ತಹಸೀಲ್ದಾರ್ ಎ.ಜಿ. ಪಂಡಿತ ಮಾತನಾಡಿ, ಗ್ರಾಮಸ್ಥರು ಸಹಕಾರ ನೀಡಿದಲ್ಲಿ, ತಪ್ಪಿಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.