ಗದಗ

ವಿದ್ಯುತ್ ಕಿರಿಕಿರಿ: ಜನಸ್ಪಂದನ ಸಭೆಯಲ್ಲಿ ಹೆಸ್ಕಾಂ ಅಧಿಕಾರಿಗಳ ಮೇಲೆ ಹಿರೇಕೊಪ್ಪ ಗ್ರಾಮಸ್ಥರ ಆಕ್ರೋಶ

Published On :

ನರಗುಂದ:  ಹಲವಾರು ದಿನಗಳಿಂದ ತಾಲೂಕಿನ ಹಿರೇಕೊಪ್ಪ ಗ್ರಾಮಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಈ ಬಗ್ಗೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಶನಿವಾರ ಗ್ರಾಮದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ನಡೆಯಿತು.  ಹೆಸ್ಕಾಂ ಅಧಿಕಾರಿಗಳು ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ, ನಿಮಗೆ ಕೆಲಸ ಮಾಡಲು ಸಾಧ್ಯವಾಗದೇ ಇದ್ದಲ್ಲಿ ತಕ್ಷಣವೇ ರಾಜಿನಾಮೆ ಕೊಟ್ಟು ಮನೆಗೆ ಹೋಗಿ ಸುಮ್ಮನೆ ಗ್ರಾಮಸ್ಥರಿಗೆ ತೊಂದರೆ ನೀಡಬೇಡಿ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಲೈನ್‌ಮನ್ ಸದಾ ಮದ್ಯಪಾನ ಮಾಡಿ ತಿರುಗುತ್ತಿದ್ದು, ಗ್ರಾಮದ ವಿದ್ಯುತ್ ಸಮಸ್ಯೆಯ ಬಗ್ಗೆ ಗಮನ ನೀಡುತ್ತಿಲ್ಲ ಎಂದು ಆರೋಪಿಸಿದರು.
ಹೆಸ್ಕಾಂ ಅಧಿಕಾರಿ ಶಾಂತಗೌಡ ಕಾಂಬಳೆ ಮಾತನಾಡಿ, ವಿದ್ಯುತ್ ಪೂರೈಕೆ ಮತ್ತು ಲೈನ್‌ಮನ್ ಬದಲಾವಣೆಗೆ ಸಂಬಂಧಿಸಿದಂತೆ ಮೇಲಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಂತೆ ಗ್ರಾಮಸ್ಥರು ಮತ್ತಷ್ಟು ಆಕ್ರೋಶ ವ್ಯಕ್ತ ಪಡಿಸಿದರು. ಮಳೆಯಾಗದೇ ಗ್ರಾಮಸ್ಥರು ದೂರದ ಗೋವಾ, ಮಹಾರಾಷ್ಟ್ರ, ಮಂಗಳೂರು, ಉಡುಪಿ, ಬೆಂಗಳೂರು ನಗರಕ್ಕೆ ಉದ್ಯೋಗಕ್ಕೆ ಗುಳೆ ಹೋಗುತ್ತಿದ್ದಾರೆ. ಅದಕ್ಕಾಗಿ ಜನತೆಗೆ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ವಿನಂತಿಸಿದರು.
ಡಬ್ಬಾ ಚಹಾದ ಅಂಗಡಿಯಲ್ಲಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಅದನ್ನು ಸಂಬಂಧಪಟ್ಟ ಇಲಾಖೆಯವರು ತಡೆಯಬೇಕು ಹಾಗೂ ಪಕ್ಕದ ಕುರುವಿನಕೊಪ್ಪ ಗ್ರಾಮಕ್ಕೆ ವಿದ್ಯುತ್ ಪೂರೈಕೆ ಮಾಡುವ ತಂತಿಗಳು ಜೋತು ಬಿದ್ದಿವೆ. ಅವುಗಳನ್ನು ಸರಿಪಡಿಸಲು ಗ್ರಾಮಸ್ಥರು ಆಗ್ರಹ ಮಾಡಿದರು. ಗ್ರಾಪಂ ಅಧ್ಯಕ್ಷ ಲಕ್ಷ್ಮೀ ವೆಂಕರಡ್ಡಿ, ಉಪಾಧ್ಯಕ್ಷ ಬಿ.ವಿ. ಕುರಿ, ಉಪತಹಸೀಲ್ದಾರ್ ಎಂ.ಕೆ. ನರಗುಂದ, ಡಾ. ಎಸ್.ಎ. ವಸ್ತ್ರದ, ಸಹಾಯಕ ಕೃಷಿ ಅಧಿಕಾರಿ ವೈ.ವೈ. ಕೊಡತಗೇರಿ, ಅನಿತಾ ಪಾಟೀಲ, ಎಚ್.ಡಿ. ಅರಳಕಟ್ಟಿ, ಅನಿಲ ಹಳ್ಳಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.