12ರಂದು ಪೌರಕಾರ್ಮಿಕರ ರಾಜ್ಯ ಮಟ್ಟದ ಸಮಾವೇಶ
ಗದಗ: ಮಹಾನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ವತಿಯಿಂದ ಜು. 12ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಪೌರಕಾರ್ಮಿಕರ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗದಗ-ಬೆಟಗೇರಿ ನಗರಸಭೆಯ ಪೌರಕಾರ್ಮಿಕರ ನೌಕರರ ಮಹಾಸಂಘದ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ರಾಮಗಿರಿ ಹೇಳಿದರು.
ಅವರು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು. 35 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪೌರಕಾರ್ಮಿಕರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದು, ಗದಗ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಪೌರಕಾರ್ಮಿಕರನ್ನು ಸಮಾವೇಶಕ್ಕೆ ಹೊರಡಿಸಲು ನಿರ್ಧರಿಸಲಾಗಿದೆ. ಹಲವಾರು ವರ್ಷಗಳಿಂದ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಮಾತಿಗೊಳಿಸಬೇಕೆಂದು ಆಗ್ರಹಿಸಿ ಸಮಾವೇಶವನ್ನು ನಡೆಸುತ್ತಿದ್ದು, ರಾಜ್ಯಾದ್ಯಂತ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಹಲವಾರು ರೀತಿಯಲ್ಲಿ ಹೋರಾಟಗಳನ್ನು ಮಾಡಲಾಗಿದೆ. ರಾಜ್ಯ ಉಚ್ಚ ನ್ಯಾಯಾಲಯವು ಮಾ. 12ರಂದು ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಪದ್ಧತಿಯನ್ನು ರದ್ದುಗೊಳಿಸಿ 35 ಸಾವಿರ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಸ್ಪಷ್ಟ ಆದೇಶವನ್ನು ನೀಡಿರುತ್ತದೆ. ನ್ಯಾಯಾಲಯ 6 ತಿಂಗಳ ಗಡುವು ನೀಡಿದ್ದು, 3 ತಿಂಗಳುಗಳು ಕಳೆದಿವೆ. ಮೂರು ತಿಂಗಳೊಳಗೆ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿರುತ್ತದೆ. ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಜು. 12ರಂದು ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಹಲವು ಸಚಿವ, ಶಾಸಕರು ಪಾಲ್ಗೊಳ್ಳಲಿದ್ದು, ಜು. 11ರಂದು ಸಂಜೆ 5ಕ್ಕೆ ಗದಗ ರೇಲ್ವೆ ನಿಲ್ದಾಣಕ್ಕೆ ಪೌರಕಾರ್ಮಿಕರು ಆಗಮಿಸಿ ಬೆಂಗಳೂರು ಚಲೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

