ಮೂರು ವಾರ್ಡ್ಗೊಂದು ಶುದ್ಧ ಕುಡಿವ ನೀರು ಘಟಕ
ಗಜೇಂದ್ರಗಡ: ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿತರಿಸುತ್ತಿರುವ ಶುದ್ಧ ಕುಡಿಯುವ ನೀರು ಸಾರ್ವಜನಿಕರಿಗೆ ಸಮರ್ಪಕವಾಗಿ ಲಭಿಸುತ್ತಿಲ್ಲ. ಹೀಗಾಗಿ ಪ್ರತಿ 3 ವಾರ್ಡ್ಗಳಿಗೊಂದು ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಿ ಎಂದು ಪುರಸಭೆ ವಿಪಕ್ಷ ನಾಯಕ ಶಿವರಾಜ ಘೋರ್ಪಡೆ ಮತ್ತು ಸದಸ್ಯ ಎಂ.ಎಸ್. ಹಡಪದ ಸ್ಥಳೀಯ ಆಡಳಿತಕ್ಕೆ ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಗೌಳಿಗಲ್ಲಿಯಲ್ಲಿ ಪುರಸಭೆ ವತಿಯಿಂದ ಆರಂಭಿಸಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಪಟ್ಟಣದ ಜನತೆಗೆ ಸಮರ್ಪಕ ಸೇವೆ ಲಭಿಸುತ್ತಿಲ್ಲ ಹೀಗಾಗಿ ಕನಿಷ್ಠ 3 ವಾರ್ಡಿಗೊಂದರಂತೆ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಬೇಕು.
ಪಟ್ಟಣದ ಜನಸಂಖ್ಯೆ ಆಧಾರದ ಮೇಲೆ ಒಂದು ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರನ್ನು ಸರಬರಾಜು ಮಾಡುವುದು ಕಷ್ಟ ಸಾಧ್ಯ. ಅಲ್ಲದೇ ಸಾರ್ವಜನಿಕರು ಸರದಿ ಸಾಲಲ್ಲಿ ನಿಂತು ನೀರನ್ನು ಒಯ್ಯಲು ಪರದಾಡುತ್ತಿದ್ದಾರೆ. ಇದನ್ನೆ ಬಂಡವಾಳವಾಗಿ ಮಾಡಿಕೊಂಡು ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕದವರು ಹಣ ಆಸೆಯಿಂದ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ರು. 10 ಗೆ 20 ಲೀಟರ್ ನೀರನ್ನು ಮಾರಾಟ ಮಾಡುವ ದಂಧೆಯನ್ನು ಪ್ರಾರಂಭಿಸಿದ್ದಾರೆ. ಹೀಗಾಗಿ ಪುರಸಭೆ ಆಡಳಿತ ಹಾಗೂ ಅಧಿಕಾರಿಗಳು ಪಟ್ಟಣದ ಪ್ರತಿ 3 ವಾರ್ಡ್ಗಳಿಗೊಂದು ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವಂತೆ ಆಗ್ರಹಿಸಿದರು.
ಪುರಸಭೆ ಸದಸ್ಯ ಎಂ.ಎಸ್.ಹಡಪದ ಮಾತನಾಡಿ, ಪಟ್ಟಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಪರವಾನಗಿ ಪಡೆಯದೇ ಕುಡಿಯುವ ನೀರು ವಿತರಿಸುತ್ತಿರುವುದು ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಲೇವಡಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

