ಗದಗ

ಅಧಿಕಾರಿಗಳ ಗೈರು: ಸಭೆ ಮುಂದೂಡಿಕೆ

Published On :

ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆಯಬೇಕಾಗಿದ್ದ ಗ್ರಾಮಸಭೆ ಅಧಿಕಾರಿಗಳ ಗೈರು ಹಾಜರಿಯಿಂದ ಅನಿರ್ದಿಷ್ಟ ಕಾಲ ಮುಂದೂಡಿದ ಘಟನೆ ಜರುಗಿತು.
ಹಲವಾರು ವಿಷಯಗಳಿಗೆ ಸಂಬಂಧಪಟ್ಟಂತೆ ಗ್ರಾಮಸಭೆಯಲ್ಲಿ ಚರ್ಚೆಗಳು ನಡೆದು ಗ್ರಾಮದ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿತ್ತು. ಆದರೆ, ಸಭೆಗೆ ಕೆಲ ಸರ್ಕಾರಿ ಅಧಿಕಾರಿಗಳು ಮಾತ್ರ ಹಾಜರಾಗಿದ್ದು, ಉಳಿದ ಅಧಿಕಾರಿಗಳು ಗೈರಾಗಿದ್ದರಿಂದ ರೊಚ್ಚಿಗೆದ್ದ ಜನರು ಗ್ರಾಮಸಭೆಗೆ ಬರದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಹಿರಿಯ ಅಧಿಕಾರಿಗಳಿಗೆ ಲಿಖಿತವಾಗಿ ತಿಳಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಅಲ್ಲದೇ, ಗ್ರಾಮಸಭೆಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕಾದ ಅಧಿಕಾರಿಗಳು ಬಾರದಿರುವುದರಿಂದ ಗ್ರಾಮಸಭೆ ಬಹಿಷ್ಕರಿಸಿ ಸಭೆಯಿಂದ ಹೊರ ನಡೆದರು. ಬಳಿಕ ಪಿಡಿಒ ಅಮ್ಮನವರ ಗ್ರಾಮಸಭೆಯನ್ನು ಅನಿರ್ದಿಷ್ಟ ಕಾಲ ಮುಂದೂಡಿದ ಬಗ್ಗೆ ಮಾಹಿತಿ ನೀಡಿದರು. ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಕುಪಿತಗೊಂಡ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಬೀಗ ಜಡಿಯುವ ಪ್ರಯತ್ನಕ್ಕೆ ಮುಂದಾದರು ಆಗ ಸ್ಥಳಕ್ಕಾಗಮಿಸಿದ ಪಿಎಸ್‌ಐ ವಿಕಾಸ ಲಮಾಣಿ ಸಾರ್ವಜನಿಕರನ್ನು ಸಮಾಧಾನಪಡಿಸಿ ಸ್ಥಳದಿಂದ ಜನರನ್ನು ಚದುರಿಸಿದರು.
ಗ್ರಾಪಂ ಅಧ್ಯಕ್ಷ ಡಿ.ವೈ. ಹುನಗುಂದ ಸಭೆ ಅಧ್ಯಕ್ಷತೆ ವಹಿಸಿದ್ದರು. ವೀರಣ್ಣ ಹತ್ತಿಕಾಳ, ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ, ವ್ಯವಸಾಯ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಿದ್ದಣ್ಣ ಯಲಿಗಾರ, ಗ್ರಾಪಂನ ಸದಸ್ಯರು ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.