ಅತ್ಯಾಚಾರ ತಡೆಗೆ ವಿಫಲ: ಪ್ರತಿಭಟನೆ
ಗದಗ: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಶನಿವಾರ ಜೆಡಿಎಸ್ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಪ್ರಭುರಾಜಗೌಡ ಪಾಟೀಲ, ರಾಜ್ಯದಲ್ಲಿ ಒಂದೇ ದಿನ ದಾಖಲೆಯ 8 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಹಿಳೆಯರು, ಯುವತಿಯರಿಗೆ ಭಯದ ವಾತಾವರಣ ಉಂಟಾಗಿದೆ. ಈ ಪ್ರಕರಣಗಳ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಗಂಭೀರ ಚರ್ಚೆ, ಪ್ರತಿಭಟನೆ ಮಾಡುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವ ಕೆ.ಜೆ. ಜಾರ್ಜ್ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು.
ನಗರದ ಕೆ.ವಿ.ಎಸ್.ಆರ್. ಕಾಲೇಜು ಮೂಲಕ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ, ದಾವಲ್ ಮುಳಗುಂದ, ರಮೇಶ ಕಲಬುರ್ಗಿ, ಮಂಜುನಾಥಗೌಡ ಪರ್ವತಗೌಡ್ರ ಮಾತನಾಡಿದರು. ತಿಪ್ಪಣ್ಣ ಹುಡೇದ, ಅಜೀಜ್ಅಹಮ್ಮದ ಸಿದ್ದಾಪುರ, ಚೇತನ್ಕುಮಾರ ಹುಡೇದ, ಭೂಷಣ್ ಅಣ್ಣಿಗೇರಿ, ವಿಷ್ಣು ಅರವಟಗಿ, ಅಬ್ದುಲ್ ನರಸಾಪುರ, ಸಂತೋಷ ಪಾಟೀಲ, ಆನಂದ ತುಂಬರಮಟ್ಟಿ, ರವಿಚಂದ್ರ ಕೆರಿಯವರ, ಶಿವಾನಂದ ಗರಮುಕ್ಕಿ, ರಾಘು ಪವಾರ, ನಾಗನಗೌಡ ಪೊಲೀಸಪಾಟೀಲ, ಮಂಜುನಾಥ ಗೋಕಾವಿ, ಕಾರ್ತಿಕ್ ಹುಣಸಿಮರದ, ಮುತ್ತು ಕನ್ನಿ, ಚೇತನ ಖಾನಾಪುರ, ಸಂತೋಷ ರೊಟ್ಟಿ, ಜಗದೀಶ ಗೌಡರ, ಮಹಾಂತೇಶ ಪಾಲ್ಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

