ಗದಗ

ಪ್ರಶಸ್ತಿ ಪ್ರದಾನ

Published On :

ಗದಗ:  ತಾಲೂಕಿನ ಮಲ್ಲಸಮುದ್ರದ ಗಿರಿ ಶಿವರೇಣುಕಾ ದೇಶಿಕ ಬಸವ ಮಂದಿರದಲ್ಲಿ ಇತ್ತೀಚೆಗೆ ಜರುಗಿದ ಸಸಿ ನೆಡುವ ಕಾರ್ಯಕ್ರಮದಲ್ಲಿ ಜಲಾಶಂಕರ ದೇವಸ್ಥಾನದ ಅರ್ಚಕ ಅಂದಾನಯ್ಯ ಅಂಗಡಿ ದಂಪತಿಗಳ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಶಿವರೇಣುಕಾ ಬಸವ ದೇಶಿಕ ಶಂಭುಲಿಂಗಯ್ಯ ಕಲ್ಮಠ ಅವರು ದಂಪತಿಗೆ ಗಂಧದ ಕೊರಡು ಪ್ರಶಸ್ತಿ ನೀಡಿ ಗೌರವಿಸಿದರು. ಜಂಗಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ವಿ.ಕೆ. ಗುರುಮಠ, ಶಂಕರಗೌಡ ಭರಮಗೌಡ್ರ, ಎಂ. ಕಪ್ಪತ್ತನವರ, ಶಂಭು ಹಿರೇಮಠ, ಶಿವಲಿಂಗಶಾಸ್ತ್ರಿ ಸಿದ್ದಾಪುರ, ಕವಿತಾ ದಂಡಿನ, ಎಸ್.ಎಫ್. ವರವಿ, ಮೃತ್ಯುಂಜಯ ಅರಕೇರಿಮಠ, ಮಲ್ಲಯ್ಯಸ್ವಾಮಿ ಹಾಜರಿದ್ದರು.
ನಾನಾಸಾಹೇಬ ನಿಧನ
ಲಕ್ಷ್ಮೇಶ್ವರ: ಪಟ್ಟಣದ ತಾಯಿ ಪಾರ್ವತಿಬಾಯಿ ಮಕ್ಕಳ ಬಳಗದ ಮಹಾಪೋಷಕರಾಗಿದ್ದ ನಾನಾಸಾಹೇಬ ಬಹದ್ದೂರದೇಸಾಯಿ (63) ಶನಿವಾರ ಸಂಜೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ ಇದ್ದಾರೆ. ಶಿರಹಟ್ಟಿಯ ಫಕ್ಕೀರಸ್ವಾಮಿಮಠದ ಜಗದ್ಗುರು ಫಕ್ಕೀರ ಸಿದ್ದರಾಮ ಸ್ವಾಮಿಗಳು, ತಾಯಿ ಪಾರ್ವತಿ ಮಕ್ಕಳ ಬಳಗದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಪುರಸಭೆಯ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ, ದೇವಣ್ಣ ಬಳಿಗಾರ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.