ಹೆಣ್ಣು, ಹೊನ್ನು, ಮಣ್ಣಿಗಾಗಿ ಸತ್ತವರು ಕೋಟಿ ಕೋಟಿ
ಮುಂಡರಗಿ: ಹೆಣ್ಣಿಗಾಗಿ ಸತ್ತವರು ಕೋಟಿ ಕೋಟಿ, ಮಣ್ಣಿಗಾಗಿ ಸತ್ತವರು ಕೋಟಿ ಕೋಟಿ, ಹೊನ್ನಿಗಾಗಿ ಸತ್ತವರು ಕೋಟಿ ಕೋಟಿ ನಿನಗಾಗಿ ಸತ್ತವರನಾರನು ಕಾಣೆ ಗುಹೇಶ್ವರ ಎಂದು ಅಲ್ಲಮಪ್ರಭು ತಮ್ಮ ಈ ವಚನದ ಮೂಲಕ ಹೆಣ್ಣು, ಹೊನ್ನು, ಮಣ್ಣಿಗಾಗಿ ಈ ಜಗತ್ತಿನಲ್ಲಿ ಕೋಟ್ಯಂತರ ಜನ ಭೂತಕಾಲದಿಂದ ವರ್ತಮಾನ ಕಾಲದವರೆಗೂ ಸಾಯುತ್ತಲೇ ಬಂದಿದ್ದಾರೆ. ಭವಿಷ್ಯದಲ್ಲಿಯೂ ಸಹ ಈ ಮೂರಕ್ಕಾಗಿ ಇಂದಿಗೂ ಕೋಟಿ ಕೋಟಿ ಜನ ಸಾಯುತ್ತಿರುವುದನ್ನು ನಾವು ಕಾಣುತ್ತಿದ್ದೇವೆ ಎಂದು ದೆಹಲಿಯ ತೋಂಟದಾರ್ಯ ಶಾಖಾ ಮಠದ ಮಹಾಂತ ದೇವರು ಹೇಳಿದರು. ಅವರು ಶುಕ್ರವಾರ ಸಂಜೆ ಮುಂಡರಗಿ ತೋಂಟದಾರ್ಯ ಮಠದಲ್ಲಿ ಆಷಾಢ ಮಾಸದ ಅಂಗವಾಗಿ ಒಂದು ತಿಂಗಳ ಕಾಲ ಜರುಗುತ್ತಿರುವ ಶರಣತತ್ವ ದರ್ಶನದಲ್ಲಿ ಮಾತನಾಡುತ್ತಿದ್ದರು. ಶರಣರ ಅನುಭಾವದ ಮಾತುಗಳನ್ನು ಕೇಳುತ್ತ ನಮ್ಮ ಬದುಕನ್ನು ಸಾಗಿಸಿದರೆ ಈ ಜನ್ಮ ಹುಟ್ಟಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು.
ಶಾಲಾ ಕೊಠಡಿ ನಿರ್ಮಾಣ ನಿಧಾನ: ಗ್ರಾಮಸ್ಥರ ಆಕ್ರೋಶ
ಗಜೇಂದ್ರಗಡ: ಸಮೀಪದ ಕುಂಟೋಜಿ ಗ್ರಾಮದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಬಿಡುಗಡೆಯಾದ 5 ಕೊಠಡಿಗಳ ನಿರ್ಮಾಣ ಕಾಮಗಾರಿ ಕೈಗೊಂಡು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಕಾಮಗಾರಿ ತೀವ್ರಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮದಲ್ಲಿನ ಸರ್ಕಾರಿ ಪ್ರೌಢಶಾಲಾ ವಿರ್ದ್ಯ್ಙಾಗಳ ಸಂಖ್ಯೆ ಅನುಗುಣವಾಗಿ ರು. 35 ಲಕ್ಷ ಬಿಡುಗಡೆಗೊಳಿಸಿ ಹೆಚ್ಚುವರಿಯಾಗಿ 5 ಕೊಠಡಿಗಳ ನಿರ್ಮಾಣಕ್ಕೆ ಕಳೆದ ವರ್ಷ ಶಾಸಕ ಜಿ.ಎಸ್. ಪಾಟೀಲ್ ಭೂಮಿಪೂಜೆ ನೆರವೇರಿಸಿದ್ದರು. ಆಗ 6ರಿಂದ 8 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಪ್ರಸಕ್ತ ವರ್ಷದಲ್ಲಿ ಸೇವೆಗೆ ನೀಡಬೇಕೆಂದು ಗುತ್ತಿಗೆದಾರರಿಗೆ ತಾಕೀತು ಮಾಡಿದ್ದರು. ಈ ಕುರಿತು ಶಾಲಾ ಉಸ್ತುವಾರಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಗುತ್ತಿಗೆದಾರರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

