ಗದಗ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ

Published On :

ಗದಗ: ಅತ್ಯಾಚಾರ ಪ್ರಕರಣಗಳಿಂದ ರಾಜ್ಯದಲ್ಲಿ ಮಹಿಳೆಯರು ಮಕ್ಕಳು ಭಯಭೀತರಾಗಿದ್ದು, ಅಪರಾಧಿಗಳಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಶುಕ್ರವಾರ ಜೈ ಭೀಮ ಸೇನಾ ಸಂಘರ್ಷ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬೆಂಗಳೂರಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಗೆಳೆಯನ ಸಮ್ಮುಖದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವುದು ಖಂಡನೀಯ. ಅತ್ಯಾಚಾರದಿಂದ ಮಹಿಳೆಯರು ಭಯಭೀತರಾಗಿದ್ದಾರೆ. ಅಲ್ಲದೇ ದೆಹಲಿಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾ ಮೇಲಿನ ಅತ್ಯಾಚಾರ ಪ್ರಕರಣ ನೆನಪಿಸುವ ರೀತಿಯ ಕರಾಳ ಘಟನೆ ಶುಕ್ರವಾರ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ನಡೆದಿದೆ. ಈ ಘಟನೆ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದು. 22 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ತನ್ನ ಗೆಳೆಯನ ಸಮ್ಮುಖದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಂಧಿಸಿ ಹಾಗೂ ಉಳಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದೆ.  ಘಟಕದ ಅಧ್ಯಕ್ಷ ಗಣೇಶ ಹುಬ್ಬಳ್ಳಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಪರಾಪುರ, ಉಪಾಧ್ಯಕ್ಷ ಮಂಜುನಾಥ ತೌಜಲ್, ದೀಪಕ ಕಲ್ಮನಿ, ಪರಶುರಾಮ ಸಂಗಾಪುರ, ಓಬಳೇಶ ಯಶವಂತಪುರ, ಜೋಸೆಫ, ಹೇಮಂತ ಹುಬ್ಬಳ್ಳಿ, ಶ್ರೀಕಾಂತ ರಾಮಗಿರಿ, ಬಸವರಾಜ ಬದಾಮಿ, ರಾಜು ಅಗಸಿನಕೊಪ್ಪ, ವಿಶ್ವನಾಥ ಹಾಳಕೇರಿ, ಮಂಜುನಾಥ ಪರಾಪುರ, ಮಲ್ಲಿಕಾರ್ಜುನ ಸಂಗಾಪುರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.