ಗದಗ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 21
ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ನಡೆಸುತ್ತಿರುವ ಕಾಮುಕರಿಗೆ ರಾಜ್ಯ ಸರ್ಕಾರವು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಸೋಮವಾರ ಕರ್ನಾಟಕ ಯುವಶಕ್ತಿ ವೇದಿಕೆ ಪದಾಧಿಕಾರಿಗಳು ನಗರದ ಗಾಂಧಿ ವೃತ್ತದಲ್ಲಿ ಟೈರ್‌ಗೆ ಬೆಂಕಿಹಚ್ಚಿ ಪ್ರತಿಭಟಿಸಿದರು.
ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣಗಳು ದಿನೇ ದಿನೆ ನಡೆಯುತ್ತಿವೆ. ಇದರಿಂದಾಗಿ ಮಹಿಳೆಯರು ಭಯಭೀತರಾಗಿ ಮನೆಯಿಂದ ಹೊರಗೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟಾದರೂ ಕೂಡ ರಾಜ್ಯದ ಪ್ರತಿನಿಧಿಗಳು ಕಾಮುಕರನ್ನು ರಕ್ಷಿಸುವುದರ ಜತೆಗೆ ಮಹಿಳೆ-ಬಾಲಕಿಯ ಪರವಾಗಿ ನ್ಯಾಯ ಕೇಳಲು ಬಂದರೆ ಅವರ ಮೇಲೆಯೇ ಸುಳ್ಳು ಕೇಸ್ ದಾಖಲಿಸುತ್ತಿದ್ದಾರೆ.
ಕಾರಣ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಜರುಗಿಸಬೇಕು. ಈ ಕೃತ್ಯದಿಂದ ಭಯಗೊಂಡಿರುವ ಮಹಿಳೆ ಮತ್ತು ಬಾಲಕಿಯರು ಸುರಕ್ಷಿತ ಜೀವನ ಸಾಗಲು ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ಯುವಶಕ್ತಿ ವೇದಿಕೆಯ ವತಿಯಿಂದ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪಟ್ಟಣದ ಕೆಲ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು, ಗಾಂಧಿ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸಂಚಾರಕ್ಕೆ ಕೆಲಹೊತ್ತು ತೊಂದರೆ ಉಂಟಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಅನವಾಲರ, ರವಿ ಹೊಸಳ್ಳಿ, ಶಿವಕುಮಾರ ಹೊಸಳ್ಳಿ, ಮಹೇಶ ಹೊಸಳ್ಳಿ, ರುಸ್ತುಂ ಚಳಗೇರಿ, ಬಾಪು ನಂದಿಕೋಲಮಠ, ಸ್ವಾತಿ, ಜಾಹೀರಾ ಹುಣಸಿಮರದ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.