ಗದಗ

ಗೃಹಸಚಿವ ಜಾರ್ಜ್ ರಾಜಿನಾಮೆಗೆ ಪಟ್ಟು

Published On :

ಗದಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಅರಾಜಕತೆ ನಿರ್ಮಾಣಕ್ಕೆ ಕಾರಣವಾಗಿರುವ ಗೃಹ ಸಚಿವ ಕೆ.ಜೆ. ಜಾರ್ಜ್ ಕೂಡಲೇ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ಸೋಮವಾರ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಕೆಲಕಾಲ ರಸ್ತೆ ತಡೆ ನಡೆಸಿದರು.
ಬಳಿಕ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡಾಗಿನಿಂದ ಅಪರಾಧ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿವೆ. ಅದರಲ್ಲೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯಗಳು ಗಣನೀಯ ಹೆಚ್ಚಾಗಿವೆ. 2013ನೇ ಸಾಲಿನಲ್ಲಿ 1030 ಅತ್ಯಾಚಾರ ಪ್ರಕರಣಗಳು, 1836 ಅಪಹರಣ ಪ್ರಕರಣಗಳು ದಾಖಲಾಗಿವೆ. 2014ರ ಜೂನ್ ಅಂತ್ಯದ ವರೆಗೆ 525 ಅತ್ಯಾಚಾರ ಪ್ರಕರಣಗಳು, 2357 ಲೈಂಗಿಕ ದೌರ್ಜನ್ಯ ಹಾಗೂ 1522 ವರದಕ್ಷಿಣೆ ಪ್ರಕರಣಗಳು ದಾಖಲಾಗಿ ರಾಜ್ಯವನ್ನು ತಲ್ಲಣಗೊಳಿಸಿವೆ ಮನವಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.
ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ಶ್ರೀಕಾಂತ ಖಟವಟೆ, ಎಂ.ಎಂ. ಹಿರೇಮಠ, ಅರುಣ ಅಣ್ಣಿಗೇರಿ, ಆನಂದ ಶೇಠ, ಮೋಹನ ಮಾಳಶೆಟ್ಟಿ, ಈಶಣ್ಣ ಮುನವಳ್ಳಿ, ಪ್ರಶಾಂತ ನಾಯ್ಕರ, ಸಿರಾಜ ಬಳ್ಳಾರಿ, ಪರಶುರಾಮ ಹೆಬಸೂರ, ಮಹಿಳಾ ಘಟಕಗಳ ಪದಾಧಿಕಾರಿಗಳು, ಜಿಲ್ಲೆಯ ರೋಣ, ಶಿರಹಟ್ಟಿ, ಮುಂಡರಗಿ, ನರಗುಂದ ತಾಲೂಕುಗಳಿಂದ ಆಗಮಿಸಿದ್ದ ವಿವಿಧ ಘಟಕಗಳ ಪದಾಧಿಕಾರಿಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.