ಗದಗ

ಅಕ್ರಮ ಶೆಡ್ ತೆರವು

Published On :

ಗದಗ: ಬೆಟಗೇರಿ ಹೊರವಲಯದಲ್ಲಿರುವ ಬಣ್ಣದ ನಗರಕ್ಕೆ ಸಂಬಂಧಿಸಿದಂತೆ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಡಲಾಗಿದ್ದ ಸ್ಥಳದಲ್ಲಿ ಕೆಲ ಸ್ಥಳೀಯ ನಿವಾಸಿಗಳು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಮಂಗಳವಾರ ಸಂಜೆ ನಗರಸಭೆಯ ಸಿಬ್ಬಂದಿ ಜೆಸಿಬಿಗಳ ಮೂಲಕ ಅವುಗಳನ್ನು ತೆರವುಗೊಳಿಸಿದರು.
ಈ ವೇಳೆ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಮಧ್ಯ ಪ್ರವೇಶಿಸಿದ ನಗರಸಭೆಯ ಸದಸ್ಯ ಮಂಜುನಾಥ ಮುಳಗುಂದ ಸಾರ್ವಜನಿಕರನ್ನು ಸಮಾಧಾನ ಪಡಿಸಿದರು. ದಾಳಿಯ ಸಂದರ್ಭದಲ್ಲಿ ನಗರಸಭೆಯ ಅಭಿಯಂತರ ಶ್ರೀರಾಮ, ಆನಂದ ಬದಿ ಹಾಗೂ ಬೆಟಗೇರಿ ಸಿಪಿಐ ಜೆ.ಪಿ. ನಿಕ್ಕಂ, ಪಿಎಸ್‌ಐ ಗೊರವನಕೊಳ್ಳ ಹಾಗೂ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾಜರಿದ್ದರು. ಅಧಿಕಾರಿಗಳು ಮತ್ತು ಸಾರ್ವಜನಿಕರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು. ನಂತರ ಅಧಿಕಾರಿಗಳ ಮನವೊಲಿಕೆಯ ನಂತರ ನಗರಸಭೆಯ ಸ್ಥಳದಲ್ಲಿ ಶೆಡ್‌ಗಳನ್ನು ನಿರ್ಮಿಸಲು ಹಾಕಲಾಗಿದ್ದ ಕಂಬಗಳನ್ನು ತೆರವುಗೊಳಿಸಲಾಯಿತು. ಕೆಲಕಾಲ ಸ್ಥಳದಲ್ಲಿ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.