ಗದಗ

ಅತ್ಯಾಚಾರಿಗಳ ಸಮರ್ಥನೆ ಬೇಡ: ನಾಡಗೌಡ್ರ ಎಚ್ಚರಿಕೆ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಜು. 22
ರಾಜ್ಯದ ನಾನಾ ಕಡೆಗೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಗೃಹ ಸಚಿವ ಕೆ.ಜೆ. ಜಾರ್ಜ್ ಕಾಮುಕರನ್ನು ಸಮರ್ಥನೆ ಮಾಡಿಕೊಳ್ಳುತ್ತ ಕಾಲ ಕಳೆಯುತ್ತಿದ್ದಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ತಾಲೂಕು ಅಧ್ಯಕ್ಷ ಶಿವು ನಾಡಗೌಡ್ರ ಆರೋಪಿಸಿದರು.
ಅವರು ಮಂಗಳವಾರ ಬಿಜೆಪಿ ಯುವಮೋರ್ಚಾ ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಅತ್ಯಾಚಾರ ಪ್ರಕರಣ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದರು.
ಯುವ ಮುಖಂಡ ಮಂಜುನಾಥ ಇಟಗಿ, ದೇವಪ್ಪ ಇಟಗಿ, ಕುಮಾರಿ ಹರ್ಷ, ವಿದ್ಯಾರ್ಥಿ ಪ್ರತಿನಿಧಿ ಸುನಿತಾ ಜಮಾದಾರ ಮಾತನಾಡಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಅತ್ಯಾಚಾರ ಆರೋಪಿಗಳ ಮತ್ತು ಕಾನೂನು ರೀತಿ ಕ್ರಮ ಜರುಗಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ನೀತಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ನೀಡಿದರು. ತಹಸೀಲ್ದಾರ್ ಪರವಾಗಿ ಶಿರಸ್ತೇದಾರ ಜಿ.ಆರ್. ಕುಲಕರ್ಣಿ ಮನವಿ ಸ್ವೀಕರಿಸಿದರು.
ವಿ.ಎಸ್. ಕಣವಿಮಠ, ಮಂಜುನಾಥ ಕಟ್ಟಿಮನಿ, ಅಂದಪ್ಪ ಉಳ್ಳಾಗಡ್ಡಿ, ಜ್ಯೋತಿ ಹಾನಗಲ್, ರಮೇಶ ಹುಳಕಣ್ಣವರ, ಅರುಣಕುಮಾರ ತಳವಾರ, ಗಣೇಶ ಹಾತಲಗೇರಿ, ವಿದ್ಯಾರ್ಥಿ ಮುಖಂಡ ನೇತ್ರಾ ಪೂಜಾರ, ಲಕ್ಷ್ಮಿ ಗುಗ್ಗರಿ, ಭಾಗ್ಯ ಹಳ್ಳಿ, ಬೀರಪ್ಪ ಗೊಂಡೇದ, ಲಿಂಗರಾಜ ಇಟಗಿ, ಗೀತಾ ನಾಯಕ ಭಾರತಿ ಪೂಜಾರ, ಶೈಲಾ ಪಾಟೀಲ, ಅನಸೂಯಾ ದೊಡ್ಡಮನಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.