ಉಪನ್ಯಾಸ ಇಂದು

Updated on: 

ಗದಗ:  ತಾಪಂ ಆವರಣದಲ್ಲಿರುವ ಕಸಾಪ ಕಾರ್ಯಾಲಯದಲ್ಲಿ ಜು. 26ರಂದು ಸಂಜೆ 6ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ ಸಾಹಿತ್ಯ ಸಂಜೆ 81ನೇ ಮಾಲಿಕೆ ಕಾರ್ಯಕ್ರಮ ಜರುಗಲಿದೆ. ಗದುಗಿನ ಜೆ.ಟಿ. ಪದವಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಪ್ರೊ. ಅನಸೂಯಾ ದೇವಾಂಗಮಠ ಚಂಪೂ ಕಾವ್ಯಗಳಲ್ಲಿ ಸಾಮಾಜಿಕ ಮೌಲ್ಯಗಳು ಕುರಿತು ಉಪನ್ಯಾಸ ನೀಡಲಿದ್ದಾರೆ. ಗದುಗಿನ ಯುವ ಸಾಹಿತಿ ಶೀಲಾ ಸುಲ್ತಾನಪುರ  ಕವನ ವಾಚಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಕಸಾಪದ ಆಜೀವ ಸದಸ್ಯರು, ಸಾಹಿತ್ಯಾಭಿಮಾನಿಗಳು, ಕನ್ನಡಾಭಿಮಾನಿಗಳು, ಯುವ ಕವಿ, ಸಾಹಿತಿ, ಬರಹಗಾರರು, ಕಲಾವಿದರು, ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಮಹಿಳಾ ಸಾಹಿತಿಗಳು, ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಜಿಲ್ಲಾ ಕಸಾಪ ಪ್ರಕಟಣೆ ಮೂಲಕ ತಿಳಿಸಿದೆ.
ಕಾರ್ಗಿಲ್ ವಿಜಯೋತ್ಸವ ಇಂದು
ಗದಗ: ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ಕಾರ್ಗಿಲ್ ವಿಜಯೋತ್ಸವ ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣದ ಗೊರಟಾ ಗ್ರಾಮದಲ್ಲಿ ಯುವಮೋರ್ಚಾದಿಂದ ಸ್ಥಾಪಿಸಲು ಉದ್ದೇಶಿಸಿರುವ ಸರ್ದಾರ ವಲ್ಲಭಭಾಯಿ ಪಟೇಲರ ಮೂರ್ತಿ ಪ್ರತಿಷ್ಠಾಪನೆಗೆ ನಿಧಿ ಸಂಗ್ರಹ ಕಾರ್ಯಕ್ರಮವನ್ನು ಜು. 26ರಂದು ಮಧ್ಯಾಹ್ನ 3.30ಕ್ಕೆ  ಪಕ್ಷದ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಾಜಪುರೋಹಿತ ವಹಿಸುವರು. ಕಾರ್ಯಕ್ರಮವನ್ನು ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ ಮಾಳಶೆಟ್ಟಿ, ಎಂ.ಎಂ. ಹಿರೇಮಠ, ಎಂ.ಎಸ್. ಕರಿಗೌಡ್ರ, ಈಶಣ್ಣ ಮುನವಳ್ಳಿ ಉದ್ಘಾಟಿಸುವರು ಎಂದು ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಿಂಗನಗೌಡ ಹರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಇಂದು
ಗದಗ: ಗದಗ ಶಹರ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಭೆ ಜು. 26ರಂದು ಮಧ್ಯಾಹ್ನ 3ಕ್ಕೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಶಹರ ಯುವ ಮೋರ್ಚಾ ಅಧ್ಯಕ್ಷ ಸುಧೀರ ಕಾಟಿಗರ ವಹಿಸುವರು. ಸಭೆಯನ್ನು ಶಹರ ಅಧ್ಯಕ್ಷ ಈಶಣ್ಣ ಮುನವಳ್ಳಿ ಉದ್ಘಾಟಿಸುವರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಾಜಪುರೋಹಿತ, ಲಿಂಗನಗೌಡ ಹರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ ಮಾಳಶೆಟ್ಟಿ, ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ, ರಾಜ್ಯ ಉಪಾಧ್ಯಕ್ಷ ಗೋಪಾಲ ಭಾಂಡಗೆ, ಶ್ರೀನಿವಾಸ ಭಾಂಡಗೆ ಭಾಗವಹಿಸುವರು. ಕಾರಣ ಶಹರ ಯುವ ಮೋರ್ಚಾದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರು ಭಾಗವಹಿಸಬೇಕೆಂದು ಶಹರ ಪ್ರಧಾನ ಕಾರ್ಯದರ್ಶಿ ಸಿದ್ರಾಮೇಶ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಪ್ರತಿಭಾ ಆಯ್ಕೆ
ಗದಗ:  ಸ್ಥಳೀಯ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರತಿಭಾ ಪಟ್ಟಣ 2014-15ನೇ ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಇವರು ಆಯೋಜಿಸಿದ್ದ ತಾಲೂಕು ಮಟ್ಟದ ಸುಸ್ಥಿರ ಭವಿಷ್ಯಕ್ಕಾಗಿ ಕೃಷಿಯಲ್ಲಿ ನಾವಿನ್ಯತೆಗಳು, ಅವಕಾಶಗಳು ಮತ್ತು ಸವಾಲುಗಳು ಎಂಬ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com