ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ
ಗದಗ: ಕೊಲೆ ಆರೋಪಿ ಬಸವರಾಜ ಯಲ್ಲಪ್ಪ ಹೂಗಾರನಿಗೆ ಶುಕ್ರವಾರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ರು. 5 ಸಾವಿರ ದಂಡ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇನ್ನುಳಿದ ಇಬ್ಬರನ್ನು ಬಿಡುಗಡೆಗೊಳಿಸಿ ತೀರ್ಪು ಪ್ರಕಟಿಸಿದೆ. ಜಿಲ್ಲೆಯ ರೋಣ ತಾಲೂಕಿನ ನರೇಗಲ್ಲ ಸಮೀಪದ ಹೊಸಳ್ಳಿ ಗ್ರಾಮದಲ್ಲಿ 2013ರ ಜನವರಿ 19ರಂದು ಎರಡು ಕುಟುಂಬದ ಮಧ್ಯೆ ಮನೆಯ ಮುಂದೆ ಹಾಸಿಗೆಗಳನ್ನು ತೊಳೆದು ಹಾಕುವ ನೆಪದಲ್ಲಿ ಮಾಟ ಮಂತ್ರ ಮಾಡುತ್ತಾರೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ತಂಟೆ ಪ್ರಾರಂಭವಾಗಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆಯಲ್ಲಿ ರೇಣವ್ವ ರಾಮಪ್ಪ ದಳವಾಯಿ ಎನ್ನುವ ಮಹಿಳೆಗೆ ಆರೋಪಿ ಬಸವರಾಜ ಯಲ್ಲಪ್ಪ ಹೂಗಾರ ಕೊಡಲಿ ಕಾವಿನಿಂದ ತಲೆಗೆ ಜೋರಾಗಿ ಹೊಡೆದ ಹಿನ್ನೆಲೆಯಲ್ಲಿ ರೇಣವ್ವ ತೀವ್ರ ಗಾಯಗೊಂಡು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಳು. ಈ ಕುರಿತು ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು, ಶುಕ್ರವಾರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಂಬಾದಾಸ ಕುಲಕರ್ಣಿ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಎಲ್.ಎಸ್. ಸುಳ್ಳದ ವಾದ ಮಂಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

