ಸಹ ಶಿಕ್ಷಕರಿಗೆ ದೈಹಿಕ ಶಿಕ್ಷಣ ತರಬೇತಿ
ಕನ್ನಡಪ್ರಭ ವಾರ್ತೆ, ರೋಣ, ಜು. 25
ತಾಲೂಕಿನ ಯಾವುದೇ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದ್ದಲ್ಲಿ ಅಂತಹ ಶಾಲೆಗಳಲ್ಲಿನ ಆಸಕ್ತ ಸಹ ಶಿಕ್ಷಕರಿಗೆ ದೈಹಿಕ ಶಿಕ್ಷಣ ಕುರಿತು ತರಬೇತಿ ನೀಡುವಂತೆ ಜಿಲ್ಲಾ ಉಪ ನಿರ್ದೇಶಕರು ನಿರ್ದೇಶನ ನೀಡಿದ್ದು, ಆ ದಿಸೆಯಲ್ಲಿ ಅಂತಹ ಶಾಲೆಯ ಸಹ ಶಿಕ್ಷಕರಿಗೆ ಇನ್ನು ಮುಂದೆ ದೈಹಿಕ ಶಿಕ್ಷಣದ ತರಬೇತಿ ನೀಡಲಾಗುವುದು ಎಂದು ಬಿಇಒ ಡಿ.ಐ. ಅಸುಂಡಿಹೇಳಿದರು.
ಅವರು ತಾಲೂಕಿನ ಕೊತಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿ.ಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿ ಕಾರ್ಯಾಲಯ ಸಂಯುಕ್ತಾಶ್ರಯದಲ್ಲಿ ಜರುಗಿದ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದ ಶಾಲೆಯ ಸಹ ಶಿಕ್ಷಕರಿಗೆ ದೈಹಿಕ ಶಿಕ್ಷಣ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಪ್ರಕ್ರಿಯೆ ಪರಿಪೂರ್ಣ ಮುಖವೆಂದರೆ ದೈಹಿಕ ಶಿಕ್ಷಣವಾಗಿದ್ದು, ಅದು ಶರೀರದ ಐಚ್ಛಿಕ ಸ್ನಾಯುಗಳು ಮತ್ತು ನರಗಳನ್ನು ಚಟುವಟಿಕೆಗಳಿಗೆ ಒಳಪಡಿಸುವಲ್ಲಿ ದೈಹಿಕ ಶಿಕ್ಷಣ ಸಹಕಾರಿಯಾಗುತ್ತದೆ. ಆದ್ದರಿಂದ ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ದೈಹಿಕ ಶಿಕ್ಷಣದ ಮಹತ್ವ ಕುರಿತು ತಿಳಿಸುವುದು ಅತೀ ಮುಖ್ಯವಾಗಿದೆ. ತಾಲೂಕಿನಲ್ಲಿ ದೈಹಿಕ ಶಿಕ್ಷಕರ ಕೊರತೆಯಿದ್ದ ಶಾಲೆಗಳಲ್ಲಿ ಸಹ ಶಿಕ್ಷಕರಿಗೆ ದೈಹಿಕ ಶಿಕ್ಷಣದ ತರಬೇತಿ ನೀಡಿ ದೈಹಿಕ ಶಿಕ್ಷಣ ಬಲವರ್ಧನೆಗೊಳಿಸಲಾಗುವುದು. ಸಹ ಶಿಕ್ಷಕರು ಸ್ವಯಂ ಪ್ರೇರಿತರಾಗಿ ದೈಹಿಕ ಶಿಕ್ಷಣದ ತರಬೇತಿ ಪಡೆಯಬೇಕು. ಅಂದಾಗ ಶಿಕ್ಷಕರು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದರು.
ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಎಸ್.ವೈ. ಯಡಳ್ಳಿ ಮಾತನಾಡಿದರು. ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ವಿ.ಬಿ. ಉಣಟಗೇರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯೋಪಧ್ಯಾಯ ಎಚ್.ಎಸ್. ಅಂಬಿಗೇರ, ಪ್ರಾ. ಶಿಕ್ಷಕರ ಸಂಘದ ಅಧ್ಯಕ್ಷ ವೈ.ಡಿ. ಗಾಣಿಗೇರ, ಜಿ.ಎಂ. ಲಿಂಗನಗೌಡ್ರ, ಪಿ.ಎಚ್. ವಾಲ್ಮೀಕಿ, ಜೆ.ಎಸ್. ಪಾಟೀಲ, ಯು.ಎಂ. ಬಳಿಗೇರ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಜಗದೀಶ ಬೂದಿಹಾಳ ಸ್ವಾಗತಿಸಿದರು. ಆರ್. ಮಹಾಂತೇಶ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

