ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ
ಕನ್ನಡಪ್ರಭ ವಾರ್ತೆ, ನರಗುಂದ, ಜು. 25
ಅತ್ಯಾಚಾರ, ಲೈಂಗಿಕ ದೌಜ್ಯನ ಎಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಮತ್ತು ಸರ್ಕಾರ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿ ಪದಾಧಿಕಾರಿಗಳು ಹಾಗೂ ನಾನಾ ಕಾಲೇಜುಗಳ ವಿದ್ಯಾರ್ಥಿಗಳು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿವಾಜಿ ಸರ್ಕಲ್ದಲ್ಲಿ ನೂರಾರು ವಿದ್ಯಾರ್ಥಿಗಳು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವ ಅಣಕು ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ರಾಜಧಾನಿ ಸೇರಿದಂತೆ ಎಲ್ಲ ಕಡೆ ಚಿಕ್ಕಮಕ್ಕಳು, ವಿದ್ಯಾರ್ಥಿನಿಯರು, ವೃದ್ಧರು, ಕೃಷಿ ಕೂಲಿ ಕಾರ್ಮಿಕ ಮಹಿಳೆಯರ ಮೇಲೆ ಸತತವಾಗಿ ಅತ್ಯಾಚಾರಗಳು ನಡೆದರೂ ಮುಖ್ಯಮಂತ್ರಿಗಳು ಏನೂ ನಡೆದಿಲ್ಲ ಎನ್ನುವ ರೀತಿ ವರ್ತಿಸುತ್ತಿರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು.
ತಹಸೀಲ್ದಾರ್ ವಿ.ಎಚ್.ಕೊತಬಾಳ ಮನವಿ ಸ್ವೀಕರಿಸಿ, ಸರ್ಕಾರಕ್ಕೆ ರವಾನಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಸಂಜು ನಲವಡೆ, ನಂದೀಶ ಮಠದ, ನಗರ ಕಾರ್ಯದರ್ಶಿ ಮಂಜು ಪಲ್ಲೇದ, ಸಿದ್ದು ಹೂಗಾರ, ಅಕ್ಷಯ ಜೋಶಿ, ಮಂಜುನಾಥ ಕವಡೆ, ನಿಂಗಪ್ಪ ನಾಯ್ಕರ, ಶಿವರಾಜ ಬೂದಿಹಾಳ, ಗೌರೀಶ ಪಾಟೀಲ, ವಿನಾಯಕ ಗುಲಗಂಜಿ, ವಿಜಯ ಮುಧೋಳೆ, ಮಹೇಶ ಮಠದ, ಶ್ವೇತಾ ಬಾಳಕಾಯಿ, ಶೃತಿ ಪಾಟೀಲ, ಗೀತಾ ಹಿರೇಮಠ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

