ಗದಗ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ

Published On :

ನರೇಗಲ್ಲ: ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ನಡೆಯುತ್ತಿರುವ ಅತ್ಯಾಚಾರ ಹಾಗೂ ಲೈಂಗಿಕ ಅಪರಾಧಗಳಿಂದಾಗಿ ಮಹಿಳೆಯರು ಹಾಗೂ ಚಿಕ್ಕ ಮಕ್ಕಳು ಒಬ್ಬಂಟಿಯಾಗಿ ನಿರ್ಭೀತಿಯಿಂದ ಓಡಾಡದಂತಾಗಿದೆ. ಇದರಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಅತ್ಯಾಚಾರಿಗಳ ಮೇಲೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರೋಣ ತಾಲೂಕು ಕರವೇ ಅಧ್ಯಕ್ಷ ನಿಂಗಪ್ಪ ಹೊನ್ನಾಪುರ ಹೇಳಿದರು.
ಅವರು ಈಚೆಗೆ ರೋಣ ತಾಲೂಕಿನ ಎಲ್ಲ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸ್ಥಳೀಯ ವಿವಿಧ ಶಾಲಾ ಕಾಲೇಜು ಸಹಭಾಗಿತ್ವದಲ್ಲಿ ಪಟ್ಟಣದ ಹಳೇ ಬಸ್ ನಿಲ್ದಾಣದಿಂದ ಹೊಸ ಬಸ್ ನಿಲ್ದಾಣದ ಪಕ್ಕದಲ್ಲಿರುವ ವೃತ್ತದ ವರೆಗೂ ಮೆರವಣಿಗೆ ಹೊರಟು ಬಸ್ ನಿಲ್ದಾಣದ ಪಕ್ಕದಲ್ಲಿರುವ ವೃತ್ತದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.  ಸ್ಥಳೀಯ ಓಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಶೋಕ ಬೇವಿನಕಟ್ಟಿ ಮಾತನಾಡಿದರು. ಮೆರವಣಿಗೆಯಲ್ಲಿ ಸುಭಾಷ ಕೆಳಗಡೆ, ತಾಲೂಕು ಕರವೇ ಕಾರ್ಯದರ್ಶಿ ಬಸವರಾಜ ಕಾಳೆ, ರೋಣ ತಾಲೂಕು ಕರವೇ ಮಹಿಳಾ ಅಧ್ಯಕ್ಷೆ ಖೈರುನಬಿ ಗದಗ, ತಾಲೂಕು ಉಪಾಧ್ಯಕ್ಷ ಮರ್ತುಜಾ ವಂಟಿ, ನಗರ ಘಟಕದ ಅಧ್ಯಕ್ಷ ಮೌಲಾಸಾಬ ಕುಂದಗೋಳ, ಕಾರ್ಯದರ್ಶಿ ರಮೇಶ ಕಾಟಿ, ಸಂಘಟನಾ ಕಾರ್ಯದರ್ಶಿ ಉಮೇಶ ಮೇಟಿ, ಗಜೇಂದ್ರಗಡದ ಅಧ್ಯಕ್ಷ ರಜಾಕ ಡಾಲಾಯತ್, ರಜಾಕ ಬೆಳ್ಳಟ್ಟಿ ಹಾಗೂ ಸ್ಥಳಿಯ ಶಿಕ್ಷಣ ಸಂಸ್ಥೆಗಳಾದ ಅನ್ನದಾನೇಶ್ವರ ಶಿಕ್ಷಣ ಸಂಸ್ಥೆಯ ಅಂಗ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿದ್ದರು.


ಗೌರವ ಸಮರ್ಪಣೆ ಇಂದು
ಮುಂಡರಗಿ: ತಾಲೂಕಿನ ಕೊರ್ಲಹಳ್ಳಿ ಹತ್ತಿರವಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಜುಲೈ 27ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಪಾಲಕರ ವತಿಯಿಂದ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸಿ ಸೇವಾ ನಿವೃತ್ತಿ ಹೊಂದಿದ ಪ್ರಾಚಾರ್ಯ ಬಿ. ಕಲ್ಯಾಣಿ ಅವರಿಗೆ ಗೌರವ ಸಮರ್ಪಣೆ ಮತ್ತು ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಾಚಾರ್ಯ ಕೆ. ಸುಭಾಷಿಣಿ ಅವರಿಗೆ ಸ್ವಾಗತ ಕಾರ್ಯಕ್ರಮವು ವಿದ್ಯಾಲಯದ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಮುಂಡರಗಿ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾ ಸ್ವಾಮೀಜಿ ವಹಿಸುವರು. ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಯಾಗಿ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಆಗಮಿಸುವರು. ಗದುಗಿನ ಇಂಗ್ಲಿಷ್ ಉಪನ್ಯಾಸಕ ಪ್ರೊ. ಅನಿಲ ವೈದ್ಯ ವಿಶೇಷ ಉಪನ್ಯಾಸ ಮಾಡಲಿದ್ದಾರೆ ಎಂದು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.