ಗದಗ

ಎಂಇಎಸ್ ಪು ಂಡಾಟಿಕೆ: ಕರವೇ ಪ್ರತಿಭಟನೆ

Published On :

ಲಕ್ಷ್ಮೇಶ್ವರ: ಯಳ್ಳೂರಿನಲ್ಲಿ ಮರಾಠಿ ಭಾಷೆಯಲ್ಲಿ ಹಾಕಿದ್ದ ನಾಮಫಲಕವನ್ನು ತೆರವುಗೊಳಿಸಿರುವುದಕ್ಕೆ ಆಕ್ರೋಶಗೊಂಡ ಎಂಇಎಸ್ ಪುಂಡರು ಶನಿವಾರ ಪುನಃ ಮರಾಠಿ ಭಾಷೆಯ ನಾಮಫಲಕ ನಿರ್ಮಿಸಿ ಕರ್ನಾಟಕದ ಪೊಲೀಸ್ ಇಲಾಖೆ ಹಾಗೂ ಮಾಧ್ಯಮದವರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಶಿರಹಟ್ಟಿ ತಾಲೂಕು ಕರವೇ ಕಾರ್ಯಕರ್ತರು ಪಟ್ಟಣದ ಶಿಗ್ಲಿ ಕ್ರಾಸ್ ಹತ್ತಿರ ರಸ್ತೆ ತಡೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿದರು. ಶಿರಹಟ್ಟಿ ತಾಲೂಕು ಕರವೇ ಅಧ್ಯಕ್ಷ ಶರಣು ಗೋಡಿ ಮಾತನಾಡಿ, ಗಡಿಭಾಗದಲ್ಲಿ ತಂಟೆ ಮಾಡಿ ಕರ್ನಾಟಕದ ಸಹೋದರರೊಂದಿಗೆ ಕಾದಾಡುವ ಗೂಂಡಾಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.  ಪ್ರತಿಭಟನೆ ನಂತರ ಪಟ್ಟಣದ ತಹಸೀಲ್ದಾರ್‌ಗೆ ಮನವಿ ಅರ್ಪಿಸಲಾಯಿತು. ಪ್ರತಿಭಟನೆಯಲ್ಲಿ ನಾಗೇಶ ಅಮರಾಪುರ, ಗಣೇಶ ಕುಂಬಾರ, ಪ್ರಕಾಶ ಕೊಂಚಿಗೇರಿಮಠ, ಫಕ್ಕೀರೇಶ ಶಿವಬಸಣ್ಣವರ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.