ಗದಗ

ಮಹಿಳೆ ಮಾನಸಿಕ ಸದೃಢತೆ ಹೊಂದಬೇಕು

Published On :

ಗದಗ:  ಮಹಿಳೆಯು ಮಾನಸಿಕವಾಗಿ ಸದೃಢವಾಗಿದ್ದಾಗ ಆಕೆ ಏನನ್ನಾದರೂ ಸಾಧಿಸಲು ಸಾಧ್ಯ. ಮಹಿಳೆ ಎಂದೆಂದಿಗೂ ಸಬಲೆ ಎಂದು ಶಿರಹಟ್ಟಿಯ ಸರ್ಕಾರಿ ಪಪೂ ಕಾಲೇಜಿನ ಪ್ರೊ. ಪ್ರಿಯಾಂಕ ನಡುವಿನಮನಿ ಹೇಳಿದರು. ಅವರು ಗುರುವಾರ ತಾಲೂಕು ಕಸಾಪ, ತಾಲೂಕು ಕದಳಿ ಮಹಿಳಾ ವೇದಿಕೆ ಹಾಗೂ ಗದಗ ಜಿಲ್ಲೆಯ ಪ್ರಗತಿಪರ ಮಹಿಳಾ ಸಂಘಟನೆಗಳ ಸಹಕಾರದೊಂದಿಗೆ ನಗರದ ಗಂಗಾಪುರ ಪೇಟೆಯ ದುರ್ಗಾದೇವಿ ಸಮುದಾಯ ಭವನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಹಿಳೆ ಮತ್ತು ಸಬಲೀಕರಣ ವಿಷಯವಾಗಿ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕವಿತಾ ದಂಡಿನ ಮಾತನಾಡಿದರು. ಕವಿತಾ ಕಾಶಪ್ಪನವರ, ಅಕ್ಕನ ಬಳಗದ ಅಧ್ಯಕ್ಷೆ ಕಸ್ತೂರಿ ಹಿರೇಗೌಡ್ರ ಉಪಸ್ಥಿತರಿದ್ದರು. ಸುಮಾ ಪಾಟೀಲ ಸ್ವಾಗತಿಸಿದರು. ಮಂಜರಿ ಹೊಂಬಾಳಿ ನಿರೂಪಿಸಿದರು. ಸುವರ್ಣ ವಸ್ತ್ರದ ವಂದಿಸಿದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.