ಸಮುದಾಯದ ಬಗ್ಗೆ ಕಾಳಜಿ ಇರಲಿ: ಸಿ.ಎಂ. ಉದಾಸಿ
ಗದಗ: ರಾಜಕೀಯ ಒತ್ತಡದಲ್ಲಿ ಮತ್ತು ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಪರಿಸ್ಥಿತಿಯಲ್ಲಿ ಅನಿವಾರ್ಯವಾಗಿ ಸ್ವಂತ ಸಮಾಜವನ್ನು ಕಡೆಣಿಸುವ ಘಟನೆಗಳು ಸಾಮಾನ್ಯವಾಗಿದ್ದು, ಇತರರಿಗೆ ನೋವಾಗದಂತೆ ನಮ್ಮ ಸಮಾಜ ಕಟ್ಟುವ ಕೆಲಸಕ್ಕೆ ನಾವೆಲ್ಲಾ ಮುಂದಾಗಬೇಕು ಎಂದು ಮಾಜಿ ಸಚಿವ ಸಿ.ಎಂ. ಉದಾಸಿ ಹೇಳಿದರು.
ಅವರು ಭಾನುವಾರ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಗದಗ ತಾಲೂಕು ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವ್ಯಾಪಾರವನ್ನೇ ಪ್ರಮುಖವಾದ ಉದ್ಯೋಗವನ್ನಾಗಿಸಿಕೊಂಡಿರುವ ಬಣಜಿಗ ಸಮುದಾಯದವರು ಪ್ರಸ್ತುತವಿರುವ ಶೈಕ್ಷಣಿಕ ಸವಾಲು ಎದುರಿಸಲು ಮುಂದಾಗಬೇಕಿದೆ. ಆರ್ಥಿಕವಾದ ಪ್ರಗತಿಯ ಮೂಲಕ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದರು.
ಕಾಪನಹಳ್ಳಿ ಕೆ.ಆರ್. ಪೇಟಿ ತಾಲೂಕಿನ ದಕ್ಷಿಣ ಕಾಶಿಯ ಶ್ರೀಗವಿಮಠದ ಪೀಠಾಧಿಪತಿ ಸ್ವತಂತ್ರ ಬಸವಲಿಂಗ ಶಿವಯೋಗಿಗಳು ಸಮಾರಂಭದ ಸಾನ್ನಿಧ್ಯ ವಹಿಸಿದ್ದರು. ಗದಗ ತಾಲೂಕು ಅಧ್ಯಕ್ಷ ವಿರೂಪಾಕ್ಷ ಅಕ್ಕಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಹಲವಾರು ಗಣ್ಯರನ್ನು ಸನ್ಮಾನಿಸಲಾಯಿತು. ವೇದಿಕೆಯ ಮೇಲೆ ವಿಪ ಸದಸ್ಯ ಎಸ್.ವಿ. ಸಂಕನೂರ, ವಿ.ಆರ್.ಎಲ್. ಸಮೂಹ ಸಂಸ್ಥೆಯ ಚೇರ್ಮನ್ ಡಾ. ವಿಜಯ ಸಂಕೇಶ್ವರ, ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎಂ.ವಿ. ಗೊಂಡಶಟ್ಟಿ, ರಾಜ್ಯಾಧ್ಯಕ್ಷ ಸಿದ್ದಣ್ಣ ಸಕ್ರಿ, ಗದಗ ಜಿಲ್ಲಾಧ್ಯಕ್ಷ ಅಂದಾನಪ್ಪಾ ಪಟ್ಟಣಶೆಟ್ಟಿ, ಗಂಗಣ್ಣಾ ಕೋಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

