ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ
ಕನ್ನಡಪ್ರಭ ವಾರ್ತೆ, ನರೇಗಲ್ಲ, ಜು. 28
ರಾಜ್ಯದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಅತ್ಯಾಚಾರಗಳು ನಿರಂತರ ನಡೆದಿದ್ದು, ಇದನ್ನು ತಡೆದು ಸರ್ಕಾರ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಶಾರದಾ ಮಹಿಳಾ ಮಂಡಳದ ಅಧ್ಯಕ್ಷೆ ಶಾಂತಕ್ಕ ಕೋರಧಾನ್ಯಮಠ ಆಗ್ರಹಿಸಿದರು.
ಅವರು ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಸ್ಥಳೀಯ ನಾಡಕಚೇರಿಯ ಉಪತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದರು.
ಹಳೆಬಜಾರ್ದಿಂದ ಜಾಥಾ ಮೂಲಕ ನಾಡ ಕಚೇರಿಗೆ ಆಗಮಿಸಿ ಉಪತಹಸೀಲ್ದಾರ್ ಪರವಾಗಿ ಸಹಾಯಕ ಅಧಿಕಾರಿ ಎಸ್.ಎಸ್. ತಿಮ್ಮನಗೌಡರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಾರದಾ ಮಹಿಳಾ ಮಂಡಳದ ಕಾರ್ಯದರ್ಶಿ ಶೋಭಾ ಪಲ್ಲೇದ, ಶೋಭಾ ಗುರುವಡೆಯರ, ತಾರಕ್ಕ ತೊಂಡಿಹಾಳ, ಗೀತಾ ಚಿಕ್ಕೊಪ್ಪ, ಗೀತಾ ಬೆಟಗೇರಿ, ಈರಮ್ಮ ಕಂಬಾಳಿಮಠ, ಲಕ್ಷ್ಮವ್ವ ಎಮ್ಮಿ, ಬಸವ್ವ ಬೊಳುಟಗಿ, ಚನ್ನಮ್ಮ ಬೆಟಗೇರಿ, ಲಕ್ಷ್ಮಿ ಚಿಕ್ಕೊಪ್ಪ, ಕಳಕವ್ವ ಪಾಯಪ್ಪಗೌಡ್ರ, ರೇಕಾ ದಿಂಡೂರ, ಹೊಸಮನಿ, ಮಹಾದೇವಿ ಕೊಂಡಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

