ಗದಗ

ವಿದ್ಯಾರ್ಥಿ ಜೀವನ ಸದುಪಯೋಗ ಪಡಿಸಿಕೊಳ್ಳಿ: ಅರವಟಗಿಮಠ

Published On :

ನರೇಗಲ್ಲ: ಜೀವನದಲ್ಲಿ ಒಮ್ಮೆ ಮಾತ್ರ ಬರುವಂತಹ ವಿದ್ಯಾರ್ಥಿ ಜೀವನವನ್ನು ನೀವು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಸೇವೆ ಮಾಡುವ ಗುಣ ಅಳವಡಿಸಿಕೊಳ್ಳಬೇಕು. ಅದನ್ನು ಎನ್‌ಎಸ್‌ಎಸ್ ಕಲಿಸಿಕೊಡುತ್ತದೆ. ಎನ್‌ಎಸ್‌ಎಸ್ ಕಾರ್ಯಕರ್ತರಾಗಿರಲು ಹೆಮ್ಮೆ ಪಡಬೇಕೆಂದು ನಿವೃತ್ತ ಪ್ರಾಚಾರ್ಯ ಡಿ.ಎ. ಅರವಟಗಿಮಠ ಹೇಳಿದರು. ಅವರು ಈಚೆಗೆ ಸ್ಥಳೀಯ ಅನ್ನದಾನೇಶ್ವರ ಪಪೂ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾ. ವೈ.ಸಿ. ಪಾಟೀಲ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಹಾಗೂ ವ್ಯಕ್ತಿತ್ವ ವಿಕಸನ ಗುಣ ಹೊಂದಲು ಸಹಾಯಕವಾಗಲಿದೆ ಎಂದರು. ಎನ್‌ಎಸ್‌ಎಸ್ ಅಧಿಕಾರಿ ಪಿ.ವೈ. ಕರಮುಡಿ, ಎ.ಎಂ. ನದಾಫ, ಎಂ.ಎಸ್. ಹೊನವಾಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.