ಮಹಿಳೆಯರ ರಕ್ಷಣೆಗೆ ಬದ್ಧ
ಗದಗ: ಮಹಿಳೆಯರ ರಕ್ಷಣೆಗೆ ಪೊಲೀಸ್ ಇಲಾಖೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದು, ಅನ್ಯಾಯ, ಶೋಷಣೆ, ದೌರ್ಜನ್ಯ ಇನ್ಯಾವುದೇ ರೀತಿಯಲ್ಲಿ ತೊಂದರೆಯಾದರೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಶಹರ ಸಿಪಿಐ ವೆಂಕನಗೌಡ ಪಾಟೀಲ ಹೇಳಿದರು.
ಗಂಗಾಪುರ ಪೇಟೆಯ ದುರ್ಗಾದೇವಿ ಸಮುದಾಯ ಭವನದಲ್ಲಿ ತಾಲೂಕು ಕಸಾಪ, ತಾಲೂಕು ಕದಳಿ ಮಹಿಳಾ ವೇದಿಕೆ ಹಾಗೂ ವಿವಿದ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಹಿಳೆ ಮತ್ತು ಪೊಲೀಸ್ ಇಲಾಖೆ ವಿಷಯವಾಗಿ ಮಾತನಾಡಿದರು. ಶಹರ ಠಾಣೆಯ ಪಿಎಸ್‌ಐ ಮಹಾಂತೇಶ ಮಾತನಾಡಿ ಅತ್ಯಾಚಾರ ಪ್ರಕರಣಗಳು ಒಟ್ಟಾರೆಯಾಗಿ ಮಹಿಳೆಯರಿಗೆ ಅನ್ಯಾಯವಾದ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ. ಇರುವ ಕಾನೂನನ್ನು ಇನ್ನಷ್ಟು ಬಲಪಡಿಸಲಾಗಿದೆ ಆದ್ದರಿಂದ ಮಹಿಳೆಯರು ಯಾವುದೇ ರೀತಿ ಆತಂಕ, ಭಯ ಹೊಂದುವ ಅವಶ್ಯಕತೆ ಇಲ್ಲ ಎಂದರು.
ಅಧ್ಯಕ್ಷತೆ ವಹಿಸಿದ್ದ ಕವಿತಾ ದಂಡಿನ, ಕವಿತಾ ಕಾಶಪ್ಪನವರ, ಸುಮಾ ಶ್ರೀಗಿರಿ ಮಾತನಾಡಿದರು. ರೋಣ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಡಾ. ಪ್ರಮೀಳಾ ಕೊರಧ್ಯಾನಮಠ, ಸುಮಾ ಪಾಟೀಲ, ರೋಣದ ಯಶಸ್ವಿನಿ ಮಹಿಳಾ ಸಹಾಯ ಹಾಗೂ ಸಾಂತ್ವನ ಕೇಂದ್ರದ ಅಧ್ಯಕ್ಷೆ ಕವಿತಾ ಹುಲ್ಲೂರ, ಅಕ್ಕನ ಬಳಗದ ಅಧ್ಯಕ್ಷೆ ಕಸ್ತೂರಿ ಹಿರೇಗೌಡ್ರ, ಸುವರ್ಣ ಲೇಡಿಸ್ ಕ್ಲಬ್ ಅಧ್ಯಕ್ಷೆ ಶೈಲಜಾ ಕವಲೂರ, ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷೆ ನಿರ್ಮಲಾ ಪಾಟೀಲ, ಎಸ್‌ಎಸ್‌ಕೆ ಮಹಿಳಾ ಮಂಡಳದ ಅಧ್ಯಕ್ಷೆ ಲಲಿತಾ ಬಾಕಳೆ ಹಾಜರಿದ್ದು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

