ಮುಂಡರಗಿ: ರಂಜಾನ್ ಸಂಭ್ರಮ
ಮುಂಡರಗಿ: ಪಟ್ಟಣದಲ್ಲಿ ಮಂಗಳವಾರ ಮುಸ್ಲಿಂ ಹಾಗೂ ಇತರೆ ಸಮಾಜದ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡುವುದರೊಂದಿಗೆ ಸಂಭ್ರಮದ ರಂಜಾನ್ ಆಚರಿಸಲಾಯಿತು. ಬೆಳಗ್ಗೆ 10 ಗಂಟೆಯಿಂದಲೇ ಪಟ್ಟಣದ ವಿವಿಧ ಭಾಗಗಳಲ್ಲಿರುವ ಮುಸ್ಲಿಂ ಬಾಂಧವರು ಒಂದೆಡೆ ಸೇರಿಕೊಂಡು ನಂತರ 10-30ರ ವೇಳೆಗೆ ಸಾಮೂಹಿಕ ನಮಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕ ರಾಮಕೃಷ್ಣ ದೊಡ್ಡಮನಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಡರಗಿ ಕೋಮು ಸೌಹಾರ್ದಕ್ಕೆ ಹೆಸರಾದ ಪಟ್ಟಣ. ಇಲ್ಲಿ ಯಾವುದೇ ಹಬ್ಬ ಹರಿದಿನಗಳು ಬಂದರೂ ಜಾತಿ, ಭೇದವಿಲ್ಲದೇ ಎಲ್ಲರೂ ಸೇರಿಕೊಂಡು ವಿಜೃಂಭಣೆಯಿಂದಲೇ ಆಚರಿಸುತ್ತಾ ಬಂದಿದ್ದೇವೆ ಎಂದು ತಿಳಿಸಿದರು. ಕರಬಸಪ್ಪ ಹಂಚಿನಾಳ, ಹೇಮಂತಗೌಡ ಪಾಟೀಲ, ಧ್ರುವಕುಮಾರ ಹೊಸಮನಿ, ರಾಮು ಕಲಾಲ, ಶೇಖರಾಜ ಹೊಸಮನಿ, ನಬಿಸಾಬ ಕೆಲೂರ, ಎಸ್.ಡಿ. ಮಕಾಂದಾರ, ಎ.ಪಿ. ದಂಡಿನ, ಡಿ.ಎಂ. ನಾಗರಹಳ್ಳಿ, ಡಾ. ಬಸವರಾಜ ಮೇಟಿ, ಎಂ.ಜಿ. ವಡ್ಡಟ್ಟಿ, ಅಬ್ದುಲ್ ಖುರೇಷಿ, ಕರೀಂಸಾಬ ಮುಲ್ಲಾ, ಫಕ್ರುದ್ದೀನ್ ಹಾರೋಗೇರಿ, ಬಾಬುಜಾನ್ ಗದಗ, ಕಬಲಾಸಾಬ್ ಆಲೂರ, ಅನ್ವರಬಾಷಾ ಹಣಗಿ ಪಾಲ್ಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

