ಗದಗ

ಕಸಾಪ ಸಂಸ್ಥಾಪನಾ ದಿನ ನಮೂದಿಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜೂ. 1
ನಾಲ್ವಡಿ ಕೃಷ್ಣರಾಜ ಒಡೆಯರ್, ಎಂ. ವಿಶ್ವೇಶ್ವರಯ್ಯರಂತಹ ಮಹಾನ್ ವ್ಯಕ್ತಿಗಳ ಕನಸಿನ ಕೂಸಾದ ಕನ್ನಡ ನಾಡಿನ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಂಕವಾದ ಪ್ರತಿ ವರ್ಷದ ಮೇ 5 ಅನ್ನು ತಾವು ರಚಿಸುವ ದಿನದರ್ಶಿಕೆ ಹಾಗೂ ಗೋಡೆಗೆ ತಗುಲು ಹಾಕುವ ಕ್ಯಾಲೆಂಡರ್‌ಗಳಲ್ಲಿ ನಮೂದಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗದಗ ತಾಲೂಕು ಘಟಕವು ನಗರದ ಪ್ರಖ್ಯಾತ ಪಂಚಾಂಗ ಕರ್ತರಾದ ಬಸವಯ್ಯ ಶಾಸ್ತ್ರಿಗಳಿಗೆ ಮನವಿ ಸಲ್ಲಿಸಿತು.
ಆಯೋಗದ ನೇತೃತ್ವ ವಹಿಸಿದ್ದ ನಿವೃತ್ತ ಪ್ರಾಚಾರ್ಯ ಹಾಗೂ ಗದಗ ಜಿಲ್ಲಾ ಕಸಾಪದ ಸಲಹಾ ಸಮಿತಿಯ ಸದಸ್ಯ ಪ್ರಾ. ಕೆ.ಎಚ್. ಬೇಲೂರ ಮಾತನಾಡಿ, ಇದುವರೆಗೂ ಕಸಾಪ ಸದಸ್ಯತ್ವ ಹೊಂದಿದವರಿಗೆ ಮಾತ್ರ ಮೀಸಲಾಗಿತ್ತು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಆಚರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ. ಪ್ರತಿ ವರ್ಷ ಮೇ 5ರಂದು ಕನ್ನಡಿಗರು ಸಂಭ್ರಮದಿಂದ ಈ ಹಬ್ಬವನ್ನು ಮನೆ ಮನೆಯಲ್ಲಿ, ಶಾಲಾ ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಸಡಗರದಿಂದ ಆಚರಿಸಬೇಕು. ನಾಡಿನ ಹಿರಿಯ ಸಾಹಿತಿಗಳನ್ನು ಗೌರವಿಸಿ ಅವರನ್ನು ಅಂದು ನೆನೆಯಬೇಕು. 2014 ರ ಮೇ 5ರಿಂದ 2015ರ ಮೇ 5ರ ವರೆಗೆ ಶತಮಾನೋತ್ಸವದ ಸಂಭ್ರಮದಲ್ಲಿರುವ ಈ ಸಂಸ್ಥೆಯ ಶತಮಾನೋತ್ಸವವನ್ನು ಎಲ್ಲರೂ ಸಡಗರದಿಂದ ಆಚರಿಸುವಂತಾಗಬೇಕು ಎಂದರು.
ತಾಲೂಕು ಕಸಾಪ ಅಧ್ಯಕ್ಷ ಕಿಶೋರಬಾಬು ನಾಗರಕಟ್ಟಿ, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶಶಿಕಾಂತ ಕೊರ್ಲಹಳ್ಳಿ ಮಾತನಾಡಿದರು.
ತಾಲೂಕು ಕಸಾಪ ಪದಾಧಿಕಾರಿಗಳಾದ ಬಿ.ಜಿ. ಹಿರೇಮಠ, ವೆಂಕಟೇಶ ಚವಕ್ಕನವರ ಶ್ರೀಶೈಲಪ್ಪ ಕೊರ್ಲಹಳ್ಳಿ, ಆರ್.ಜಿ.ಚಿಕ್ಕಮಠ, ವೆಂಕಟೇಶ ಬಿಂಕದಕಟ್ಟಿ ಸೇರಿದಂತೆ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಆಜೀವ ಸದಸ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.