ಗದಗ

ಶೈಕ್ಷಣಿಕ ಅಭಿವೃದ್ಧಿ ಸರ್ಕಾರದ ಗುರಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜೂ. 1
ಸಮಾಜವು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಶಾಲೆಗೆ ದಾಖಲಾದ ಮಗು ಕಡ್ಡಾಯವಾಗಿ ಶಾಲೆಯಲ್ಲಿ ಉಳಿಯುವ ಜತೆಗೆ ಗುಣಮಟ್ಟದ ಕಲಿಕೆ ಹೊಂದುವಂತೆ ಪ್ರೆರೇಪಿಸುವುದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಡಿಡಿಪಿಐ ರಾಜೇಂದ್ರ ಪ್ರಸಾದ ಹೇಳಿದರು.
ನಗರದ ಎಸ್.ಎಂ. ಕೃಷ್ಣಾ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 1ರಲ್ಲಿ ಆಯೋಜಿಸಲಾಗಿದ್ದ 2014-15ನೇ ಶೈಕ್ಷಣಿಕ ಸಾಲಿನ ಗದಗ ಜಿಲ್ಲಾ ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಬಲೂನ್‌ಛಹಾರಿ ಬಿಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸರ್ಕಾರ ಉಚಿತ ಸಮವಸ್ತ್ರ ಮಧ್ಯಾಹ್ನ ಬಿಸಊಿಟ, ಪಠ್ಯ ಪುಸ್ತಕ, ಶಿಷ್ಯವೇತನ, ಸ್ಕೂಲ್ ಬ್ಯಾಗ್, ಬೈಸಿಕಲ್ ಹೀಗೆ ಅನೇಕ ಸೌಲಭ್ಯಗಳನ್ನು ಒದಗಿಸಿದೆ. ಇಂತಹ ಅನೇಕ ಜನಪರ, ವಿದ್ಯಾರ್ಥಿಪರ ಯೋಜನೆಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಪ್ರಾಮಾಣಿಕವಾಗಿ ಸರ್ಕಾರದ ನಿಯಮಾನುಸಾರ ಅನುಷ್ಠಾನಗೊಳಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಮಾತನಾಡಿ, ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಿ ಹೊಸ ಹೊಸ ಕೌಶಲ್ಯಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಬೋಧನೆ ಮಾಡಿದಾಗ ಮಾತ್ರ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಿದೆ ಎಂದರು. ಡಿಡಿಪಿಐ ಕಾರ್ಯಾಲಯದ ವಿಷಯ ಪರಿವೀಕ್ಷಕ ಎ.ಎ. ಖಾಜಿ, ಫರೂಕಿ ದಾಸರ, ಶಿಕ್ಷಕರ ಸಂಘದ ಅಧ್ಯಕ್ಷ ಎ.ಎನ್. ಬಳ್ಳಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗದಗ ಶಹರ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಪಿ. ಚಿಂಚೆವಾಡಿ, ಇ.ಎಸ್. ಮುತಗಾರ, ಎಸ್‌ಡಿಎಂಸಿ ಅಧ್ಯಕ್ಷ ಎಂ.ಎನ್. ಮನ್ನಮ್ಮನವರ, ಪಿ.ಪಿ. ಬಳ್ಳಾರಿ, ಬಸವರಾಜ ಉಮ್ಮಚಗಿ, ಮುಖ್ಯೋಪಾಧ್ಯಾಯಿನಿ ಎಸ್.ಎಂ. ಕಿನ್ನಾಳ, ಬಿ.ಬಿ. ಕುಂದಗೋಳ, ಸಿಆರ್‌ಪಿ ಬಿ.ಸಿ. ಬಿಳೆಬಾಳ ಇದ್ದರು. ಎಸ್.ಎಸ್.ಗೌಡರ, ಎಸ್.ಟಿ. ಲಮಾಣಿ ಪ್ರಾರ್ಥಿಸಿದರು. ಎಂ.ಕೆ. ಹುಯಿಲಗೂಳ ಸ್ವಾಗತಿಸಿದರು. ಎಚ್.ಆರ್. ಕೋಣಿಮನಿ ನಿರೂಪಿಸಿದರು. ಎಸ್.ಟಿ.ಕುಲಕರ್ಣಿ ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.