ಕಾಮಗಾರಿಯಲ್ಲಿ ಭ್ರಷ್ಟಾಚಾರ
ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಜೂ. 2
ಸಮೀಪದ ರಾಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆದ ಅಭಿವೃದ್ದಿ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕೈಗೊಂಡಿದ್ದ ಧರಣಿ ಸತ್ಯಾಗ್ರಹಕ್ಕೆ ಮಣಿದ ಜಿಲ್ಲಾಡಳಿತ ಪೊಲೀಸ್ ಸುಪರ್ದಿಯಲ್ಲಿ ತನಿಖಾ ತಂಡ ಸೋಮವಾರ ಗ್ರಾಪಂ ವ್ಯಾಪ್ತಿಯ ಕಾಲಕಾಲೇಶ್ವರ ಗ್ರಾಮಕ್ಕೆ ತೆರಳಿ ಕಾಮಗಾರಿ ಪರಿಶೀಲಿಸಿದರು.
ರಾಜೂರು ಗ್ರಾಪಂ ವ್ಯಾಪ್ತಿಗೊಳಪಡುವ ದಿಂಡೂರ, ಕಾಲಕಾಲೇಶ್ವರ, ಭೈರಾಪುರ, ಭೈರಾಪುರ ತಾಂಡಾ, ರಾಜೂರು ಗ್ರಾಮಗಳಿಗೆ ಸರ್ಕಾರ ನೀಡಿದ ಅನುದಾನ ಸಮರ್ಪಕ ಬಳಕೆಯಾಗದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಜಡಿದು ಧರಣಿ ಸತ್ಯಾಗ್ರಹ ಕೈಗೊಂಡಿದ್ದರ ಪರಿಣಾಮ ಎಚ್ಚೆತ್ತ ಜಿಲ್ಲಾಡಳಿತ ರಾಜೂರು ಗ್ರಾಪಂನಲ್ಲಿ ನಡೆದಿದೆನ್ನಲಾದ ಅಕ್ರಮಗಳ ತನಿಖೆಗಾಗಿ ನಾಲ್ಕು ತಂಡ ರಚಿಸಿ 2010-11, 2011-12 ಹಾಗೂ 2013-14ರಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಕಡತ ಪರಿಶೀಲನೆ ಕಡತಗಳೊಂದಿಗೆ ಕಾಮಗಾರಿ ನಡೆದ ಗ್ರಾಮಗಳಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಿ ವಾಸ್ತವ ವರದಿ ಸಲ್ಲಿಸಬೇಕೆಂಬ ಜಿಲ್ಲಾಡಳಿತದ ನಿರ್ದೇಶನದಂತೆ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಮೇ 29ರಿಂದಲೇ ಕಡತ ಪರಿಶೀಲನೆ ನಡೆಸಿದ್ದಾರೆ.
ಜೂನ್ 2ರಂದು ಕಾಲಕಾಲೇಶ್ವರ ಗ್ರಾಮಕ್ಕೆ ತೆರಳಿ ಗ್ರಾಮದಲ್ಲಿ ಕೈಗೊಂಡಿದ್ದ ವಿವಿಧ ಕಾಮಗಾರಿಗಳ ನೈಜ ಚಿತ್ರಣವನ್ನು ಪರಿಶೀಲಿಸಿ ಸಾರ್ವಜನಕರ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಭೈರಾಪುರ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಿಪಿಐ(ಎಂ) ಮುಖಂಡ ಬಾಲು ರಾಠೋಡ, ಮಾರುತಿ ಚಿಟಗಿ, ಪೀರು ರಾಠೋಡ, ಕಳಕೇಶ ಉಕ್ಕಿಸಲ, ಶಶಿಧರ ಹೂಗಾರ, ರಾಮಚಂದ್ರ ಹುದ್ದಾರೆ, ವಿ.ಬಿ. ಹಪ್ಪಳದ, ಅಮರೇಶ ನೂಲ್ವಿ, ಧರ್ಮಣ್ಣ ತಳವಾರ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

