ಗದಗ

ವಿಜ್ಞಾನ, ಗಣಿತ ಪರಿಣಾಮಕಾರಿಯಾಗಿ ಬೋಧಿಸಿ: ಪ್ರಸನ್ನಕುಮಾರ

Published On :

ಗದಗ: ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತ ರಂಗಗಳಲ್ಲಿ ಪರಿಣಾಮಕಾರಿಯಾಗಿ ಮಕ್ಕಳಿಗೆ ಬೋಧಿಸಲು ಶಿಕ್ಷಕರಿಗೆ ಗದಗ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಕರೆ ನೀಡಿದರು. ನಗರದ ವಿಡಿಎಸ್‌ಟಿಸಿ ಹೈಸ್ಕೂಲ್ ಸಭಾಂಗಣದಲ್ಲಿ ಗದಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯ ವಿಜ್ಞಾನ ಶಿಕ್ಷಕರಿಗಾಗಿ ಬುಧವಾರ ಏರ್ಪಡಿಸಿದ್ದ ವಿಶೇಷ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಕರೂ ಕಲಿಕಾರ್ಥಿಗಳೇ, ಅವರು ಕೇವಲ ಪಠ್ಯ ಕಲಿಸಿದರೆ ಸಾಕಾಗದು, ಅದರೊಟ್ಟಿಗೆ ಸಾಮಾನ್ಯ ಜ್ಞಾನವನ್ನೂ ವಾಸ್ತವಿಕತೆಯನ್ನೂ ಬೋಧಿಸಿಬೇಕು. ಬದಲಾವಣೆಯ ವಿದ್ಯಮಾನಗಳನ್ನು ಅವಲೋಕಿಸಿ, ಕಲಿಸುವಿಕೆಯಲ್ಲಿ ನವೀನತೆ ಅಳವಡಿಸಿಕೊಳ್ಳಬೇಕು. ವಿಜ್ಞಾನ ಮತ್ತು ಗಣಿತ ವಿಷಯಗಳ ಕಲಿಕೆಯಲ್ಲಿ ವಿದ್ಯಾರ್ಥಿ ಹಿಂದೆ ಇದ್ದಾನೆ ಎಂದಾದರೆ ಶಿಕ್ಷಕ ಬೋಧನೆ ಎಲ್ಲೋ ತಪ್ಪಾಗಿದೆ ಎಂದರ್ಥ. ಇಂತಹ ಶಿಕ್ಷಕರು ಕಾಳಜಿ, ಜವಾಬ್ದಾರಿಯಿಂದ ಬೋಧನೆ ಮಾಡಬೇಕು ಎಂದರು. ನಿರಂತರ ಅಧ್ಯಯನದಿಂದ ಕಲಿಕಾ ಕ್ಷೇತ್ರದ ಆವಿಷ್ಕಾರಗಳು, ಬದಲಾವಣೆಗಳನ್ನು ಕರಗತ ಮಾಡಿಕೊಳ್ಳಬಹುದು. ಕಾರ್ಯಾಗಾರಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಬದಲಾವಣೆ ಕಾಣಲು ಸಾಧ್ಯ. ಬೋಧನೆಯೊಂದಿಗೆ ಪ್ರಯೋಗಗಳಿಗೂ ಅಷ್ಟೇ ಮಹತ್ವ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ವಿಜ್ಞಾನದ ಪ್ರಯೋಗಾಲಯಗಳು ವಿದ್ಯಾರ್ಥಿಗಳ ಜ್ಞಾನವರ್ಧನೆಗೆ ಸಹಾಯಕವಾಗುವಂತಿರಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಬಿ. ರಾಜೇಂದ್ರಪ್ರಸಾದ, ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ, ವಿಷಯ ಪರಿವೀಕ್ಷಕ ಜಿ.ಡಿ. ದಾಸರ, ವಿದ್ಯಾದಾನ ಶಿಕ್ಷಣ ಸಮಿತಿ ಕಾರ್ಯದರ್ಶಿ ಶ್ರೀನಿವಾಸ ಹುಯಿಲಗೋಳ, ವಿಷಯ ಪರಿವೀಕ್ಷಕ ಎ.ಎ. ಖಾಜಿ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಗದಗ ಜಿಲ್ಲೆಯ ವಿಜ್ಞಾನ ಶಿಕ್ಷಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.