ಮೇಲಧಿಕಾರಿಗಳ ವಿರುದ್ಧ ಚಾಲಕನ ಪತ್ನಿ ದೂರು
ಗದಗ: ಮೇಲಧಿಕಾರಿಗಳ ಕಿರುಕುಳ ತಾಳದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಾರಿಗೆ ಸಂಸ್ಥೆ ಬಸ್ ಚಾಲಕನ ಪತ್ನಿ ಇದೀಗ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂ.2 ರಂದು ಗದಗ ನಗರದ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಾರಿಗೆ ಸಂಸ್ಥೆ ಬಸ್ ಚಾಲಕ ಬಸವರಾಜ್ ಪತ್ನಿ ಜಯಲಕ್ಷ್ಮಿ ಕರಿಸಕ್ರಣ್ಣರ ಬುಧವಾರ ರಾತ್ರಿ ಗದಗ ಶಹರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯ ನೀಡುವಂತೆ ಮನವಿ ಮಾಡಿದ್ದಾರೆ. ಆತ್ಮಹತ್ಯೆ ಸಂದರ್ಭ ಬಸವರಾಜ ವರ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿದ್ದ ಮೂವರು ಅಧಿಕಾರಿಗಳ ಮೇಲೆ ದಲಿತ ದೌರ್ಜನ್ಯ ಕಾಯ್ದೆ ಅಡಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಎಸ್. ಗದ್ದಿಕೇರಿ, ಎಟಿಐ ಚನ್ನಪ್ಪ ಬಟ್ಟೂರ ಹಾಗೂ ಎಂ.ಜಿ. ಪಾಟೀಲ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಈ ಮೂವರು ಅಧಿಕಾರಿಗಳು ಪತಿಗೆ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ, ನಿಂದನೆಗಳಿಂದ ನೊಂದಿದ್ದರು. ಈ ಬಗ್ಗೆ ಹಲವು ಬಾರಿ ನನ್ನ ಬಳಿ ಹೇಳಿಕೊಂಡಿದ್ದರು. ಜೂ.2ರಂದು ವರ್ಗಾವಣೆ ವಿಷಯವಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಈ ರೀತಿ ಮಾಡಿಕೊಂಡಿದ್ದಾರೆ. ಇದರಿಂದ ಕುಟುಂಬಕ್ಕೆ ಅನ್ಯಾಯವಾಗಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ನಮಗೆ ನ್ಯಾಯ ಕೊಡಿಸಬೇಕು ಎಂದು ಚಾಲಕನ ಪತ್ನಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

