ಗದಗ

ಪಠ್ಯಪುಸ್ತಕಗಳಲ್ಲಿ ಇತಿಹಾಸ ಸೇರಲಿ: ಕುಲಕರ್ಣಿ

Published On :

ಕನ್ನಡಪ್ರಭ ವಾರ್ತೆ, ನರಗುಂದ, ಜೂ. 12
ದೇಶದಲ್ಲಿ ಪ್ರಥಮ ಬಾರಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕೀರ್ತಿ ನರಗುಂದ ನಾಡಿನ ಅಂದಿನ ವೀರ ಬಾಬಾಸಾಹೇಬರ ಸಲ್ಲುತ್ತದೆ. ಈ ನಾಡಿಗಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ವೀರನ ಇತಿಹಾಸವನ್ನು ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಎಂದು ಕಳಸಾ-ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಸರ್ಕಾರಕ್ಕೆ ಆಗ್ರಹಿಸಿದರು.
ಅವರು ಗುರುವಾರ ವೀರ ಬಾಬಾಸಾಹೇಬರ 157ನೇ ಪುಣ್ಯಸ್ಮರಣೆಯ ನಿಮಿತ್ತ ಪಟ್ಟಣದ ಪುರಸಭೆ ಎದುರಿಗೆ ಇರುವ ವೀರ ಬಾಬಾಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 1857-58ರ ಸುಮಾರಿಗೆ ಬ್ರಿಟೀಷ್ ಚಕ್ರಾಧಿಪತ್ಯಕ್ಕೆ ಇಡೀ ಹಿಂದುಸ್ಥಾನವು ವಶವಾಗಿತ್ತು. ಆದರೆ, ಕಿತ್ತೂರು ಸಂಸ್ಥಾನ ಹಾಗೂ ನರಗುಂದ ಸಂಸ್ಥಾನಗಳು ಅವರ ವಿರುದ್ಧ ಸೆಡ್ಡು ಹೊಡೆದು ಸ್ವತಂತ್ರವಾಗಿ ತೆಲೆಯತ್ತಿ ನಿಂತಿದ್ದವು. ನಂತರ ಆಂಗ್ಲರ ಕುತಂತ್ರದಿಂದ ನಮ್ಮವರಿಂದಲೇ ನರಗುಂದ ಸಂಸ್ಥಾನದ ವೀರ ಬಾಬಾಸಾಹೇಬ ಭಾವೆಯವರಿಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟಕ್ಕಾಗಿ ತಮ್ಮ ಪ್ರಾಣವನ್ನು ಬಲಿ ನೀಡಿದರು. ಅಂತಹ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸರ್ಕಾರ ಗಮನಸಿ ಅವರ ಚರಿತ್ರೆಯನ್ನು ಪಠ್ಯದಲ್ಲಿ ಅಳವಡಿಸಿ ಇಂದಿನ ಯುವಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕಿದೆ ಎಂದರು.
ಪಂಚಗೃಹಗುಡ್ಡ ಹಿರೇಮಠದ ಸಿದ್ದಲಿಂಗ ಶ್ರೀಗಳು, ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳು, ಬಸನಗೌಡ ಚಿಕ್ಕನಗೌಡ್ರ, ಚಳಪ್ಪ ನಾಯ್ಕರ, ರವಿ ಹೊಂಗಲ, ನಂದೀಶ ಮಠದ, ಮಂಜು ಪಲ್ಲೇದ, ಸಿದ್ದು ಹೂಗಾರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.