ಗದಗ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಅವಶ್ಯ: ಎಸ್.ಎಸ್. ಮುರಗೋಡ

Published On :

ಗದಗ: ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಸ್. ಮುರಗೋಡ ಹೇಳಿದರು.
ಅವರು ಗುರುವಾರ ನಗರದ ಲಾಯನ್ಸ್ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ, ಆರಕ್ಷಕ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಲಾಯನ್ಸ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಮಾತನಾಡಿ, ಬಾಲ ಕಾರ್ಮಿಕರನ್ನು ಕರೆತಂದು ಅವರಿಗೆ ಉತ್ತಮವಾದ ಶಿಕ್ಷಣ, ಊಟ, ವಸತಿ ನೀಡಲು ಬಾಲಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಸಿಇಒ ವೀರಣ್ಣ ತುರಮರಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಂಘ ಸಂಸ್ಥೆಗಳು ಕೈಜೋಡಿಸಬೇಕೆಂದು ಸೂಚಿಸಿದರು. ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ ಜಿ., ನ್ಯಾಯಾಧೀಶ ಹೊಸಮನಿ ಪುಂಡಲೀಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಚ್.ಎಸ್. ಪರಮೇಶ್ವರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಬಾಲಕೃಷ್ಣ, ದೈಹಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕುಂಟೋಜಿ, ಲಾಯನ್ಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಎಚ್.ಎಸ್. ದಳವಾಯಿ, ಎಸ್.ಜಿ. ಪಲ್ಲೇದ, ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ ಮುಂತಾದವರು ಉಪಸ್ಥಿತರಿದ್ದರು. ಶಿಲ್ಪಾ ಪಾಟೀಲ ಉಪನ್ಯಾಸ ನೀಡಿದರು. ಸಂಜನಾ ವಾದೋನಿ ಪ್ರಾರ್ಥಿಸಿದರು. ಯೋಜನಾ ನಿರ್ದೇಶಕ ಗವಿಸಿದ್ದಪ್ಪ ಸ್ವಾಗತಿಸಿದರು. ಬಿ.ಎಂ. ಕುಕನೂರ ನಿರೂಪಿಸಿದರು. ಕಾರ್ಮಿಕ ನಿರೀಕ್ಷಕ ಎಂ.ಎಂ. ಯತ್ನಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.