ಗದಗ

ಶತಮಾನೋತ್ಸವ ಹಣ ದುರುಪಯೋಗ: ಮುತ್ತಿಗೆ

Published On :

ಕನ್ನಡಪ್ರಭ ವಾರ್ತೆ, ನರಗುಂದ, ಜೂ. 13
ಪಟ್ಟಣದ ಸರ್ಕಾರಿ ಸಿದ್ದೇಶ್ವರ ಪ್ರೌಢಶಾಲೆ 2010ನೇ ಸಾಲಿನ ಶತಮಾನೋತ್ಸವ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಿಸಲು ಅಂದು ಹಳೇ ವಿದ್ಯಾರ್ಥಿಗಳಿಂದ ಸಂಘ-ಸಂಸ್ಥೆಗಳಿಂದ ಹಣ ಕೂಡಿಸಲಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಶತಮಾನೋತ್ಸವ ನಡೆಯಲಿಲ್ಲ. ಈ ಹಣದ ವಿವರ ಈಗಿನ ಮುಖ್ಯೋಪಾಧ್ಯಾಯರಿಗೆ ಕೇಳಿದರೆ ತಮಗೆ ಈ ಬಗ್ಗೆ ಮಾಹಿತಿ ಇಲ್ಲವೆಂದು ಹೇಳುತ್ತಾರೆ ಎಂದು ಆರೋಪಿಸಿ ಶಾಲೆಯ ಹಳೆ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
2010ನೇ ಸಾಲಿನಲ್ಲಿ ಈ ಶಾಲೆಗೆ 100 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಅಂದಿನ ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಮಾಡುವ ಬಗ್ಗೆ ಸಭೆ ಸೇರಿ ವಿವಿಧ ಸಮಿತಿಗಳನ್ನು ರಚಿಸಿ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳಿಂದ ಲಕ್ಷಾಂತರ ರು. ದೇಣಿಗೆ ಸಂಗ್ರಹಿಸಲಾಗಿತ್ತು. ಆದರೆ, ಮುಂದೆ ಅನಿವಾರ್ಯ ಕಾರಣಗಳಿಂದ ಶತಮಾನೋತ್ಸವ ಜರುಗಲಿಲ್ಲ.
ಶತಮಾನೋತ್ಸವ ಇಂದು-ನಾಳೆ ಜರುಗಬುಹುದೆಂದು ಈ ಶಾಲೆಯಲ್ಲಿ ಕಲಿತ ಹಲವಾರು ಹಳೆ ವಿದ್ಯಾರ್ಥಿಗಳು ಸುಮ್ಮನಿದ್ದರು. 4 ವರ್ಷ ಕಳೆದರೂ ಕಾರ್ಯಕ್ರಮ ನಡೆಯದಿರುವುದರಿಂದ ಶಾಲೆಯ ಹಳೆ ವಿದ್ಯಾರ್ಥಿಗಳು ಶುಕ್ರವಾರ ಶಾಲೆಗೆ ಭೇಟಿ ನೀಡಿ 2013ನೇ ಸಾಲಿನಲ್ಲಿ ಶತಮಾನೋತ್ಸವಕ್ಕೆ ಸಂಗ್ರಹಿಸಿದ ಹಣದ ಲೆಕ್ಕ ಕುರಿತು ಮುಖ್ಯೋಪಾಧ್ಯಾಯ ವಾಸನ ಅವರಿಗೆ ಕೇಳಿದಾಗ ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ಬೇಕಾದರೆ ಹಿಂದಿನ ಮುಖ್ಯೋಪಾಧ್ಯಾಯರ ದೂರವಾಣಿ ಸಂಖ್ಯೆ ಕೊಡುತ್ತೇನೆ ಅವರನ್ನೇ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ ಎಂದರು. ಇದರಿಂದ ಆಕ್ರೋಶಗೊಂಡ ಹಳೇ ವಿದ್ಯಾರ್ಥಿಗಳು ಶಿಕ್ಷಣಾಧಿಕಾರಿ ಅವರನ್ನು ಕರೆಯಿಸಿ ಈ ಕುರಿತು ಸಮಗ್ರ ಮಾಹಿತಿ ತಿಳಿಸದಿದ್ದಲ್ಲಿ ಎಲ್ಲ ವರ್ಗಗಳನ್ನು ಬಂದ್ ಮಾಡಿ ಶಾಲೆ ಮುಂದೆ ಪ್ರತಿಭಟನೆ ಮಾಡುತ್ತವೆ ಎಂದು ಪಟ್ಟು ಹಿಡಿದರು.
ದೂರವಾಣಿ ಮೂಲಕ ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ ವಿಷಯ ತಿಳಿಸಿ ಶಾಲೆಗೆ ಕರೆಸಿಕೊಂಡಾಗ ವಿದ್ಯಾರ್ಥಿಗಳು ಶಾಲೆ ಶತಮಾನೋತ್ಸವಕ್ಕೆ ವಿವಿಧ ಸಂಘ-ಸಂಸ್ಥೆಗಳಿಂದ, ಹಳೆಯ ವಿದ್ಯಾರ್ಥಿಗಳಿಂದ ಲಕ್ಷಾಂತರ ರು ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದೇವೆ. ಈ ಕುರಿತು ಸಮಗ್ರ ಮಾಹಿತಿ ನೀಡುವಂತೆ ಆಗ್ರಹಿಸಿದರು.
ಶಿಕ್ಷಣಾಧಿಕಾರಿ ಮಾತನಾಡಿ, ಈ ಹಿಂದೆ ಇದ್ದ ಮುಖ್ಯೋಪಾಧ್ಯಾಯರು ಈಗ ಬೇರೆ ಶಾಲೆಗೆ ವರ್ಗಾವಣೆಗೊಂಡಿದ್ದು, ಈ ಕುರಿತು ಈ ಹಿಂದಿನ ಮುಖ್ಯೋಪಾಧ್ಯಾಯರೊಂದಿಗೆ ಚರ್ಚಿಸಿ 15 ದಿನಗಳಲ್ಲಿ ಸಂಪೂರ್ಣ ಮಾಹಿತಿ ನೀಡುವುದಾಗಿ ಭರವಸೆ ನೀಡಿದರು.
ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯಿಂದ ಹಿಂದೆ ಸರಿದರು. ಬಿ.ಆರ್. ಪಾಟೀಲ, ಜಗದೀಶ ಭೂಸಾರೆ, ಮಂಜು ಹೆಗಡೆ, ದಾವಲ ತಹಸೀಲ್ದಾರ್, ಮಂಜು ಕಾಕನೂರ, ಮಂಜು ಶಿಂದೆ, ಮಹಾಂತೇಶ ನಾಯ್ಕರ, ಶಿವು ಮೂಲಂಗಿ, ಉಮೇಶ, ರವಿ ಗಾಯಕವಾಡ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.