ಕಾಂಗ್ರೆಸ್ನಿಂದ ಪದವೀಧರ ಸಮಸ್ಯೆಗಳಿಗೆ ಪರಿಹಾರ
ಮುಂಡರಗಿ: ಪಿ.ಎಚ್. ನೀರಲಕೇರಿ ಸಾಕಷ್ಟು ಉತ್ತಮ ಕೆಲಸ ಮಾಡಿದ್ದು, ಶಿಕ್ಷಣ ಕ್ಷೇತ್ರದ ಬಗ್ಗೆಯೂ ಅಪಾರ ಕಾಳಜಿ ಹೊಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಿಂದ ನಿರುದ್ಯೋಗಿ ಪದವೀಧರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಪಿ.ಎಚ್. ನೀರಲಕೇರಿ ಅವರನ್ನು ಆಯ್ಕೆ ಮಾಡಿ ಎಂದು ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಮನವಿ ಮಾಡಿದರು. ಅವರು ಶನಿವಾರ ಹಾಗೂ ಸೋಮವಾರ ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ಎಚ್. ನೀರಲಕೇರಿ ಪರ ಪದವೀಧರರಲ್ಲಿ ಮತ ಯಾಚಿಸಿದರು. ಜ. ತೋಂಟದಾರ್ಯ ಸಿಬಿಎಸ್ಇ ಸಂಸ್ಥೆ, ರೋಟರಿ ಶಿಕ್ಷಣ ಸಂಸ್ಥೆಯ ವಿ.ಜಿ. ಲಿಂಬಿಕಾಯಿ ಕಾಲೇಜಿಗೆ ತೆರಳಿ ಮತಯಾಟಿಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೊಟ್ರೇಶ ಅಂಗಡಿ ಮಾತನಾಡಿದರು. ಪುರಸಭೆ ಉಪಾಧ್ಯಕ್ಷ ಸೋಮನಗೌಡ ಗೌಡರ, ಸದಸ್ಯ ಬಸವರಾಜ ರಾಮೇನಹಳ್ಳಿ, ರಾಮು ಭಜಂತ್ರಿ, ರಾಘವೇಂದ್ರ ಕುರಿಯವರ, ವೀರೇಶ ಸಜ್ಜನರ, ಮುದಿಯಪ್ಪ ಕುಂಬಾರ, ಎ.ವೈ. ನವಲಗುಂದ, ಧ್ರುವಕುಮಾರ ಹೊಸಮನಿ, ಸೊಲಬಪ್ಪ ಜೋಬಾಳಿ, ಗ್ಯಾನಪ್ಪ ಶೀರಿ, ಶೇಖರರಾಜ ಹೊಸಮನಿ, ವೀರಣ್ಣ ತುಪ್ಪದ ಮುಂತಾದವರು ಪಾಲ್ಗೊಂಡಿದ್ದರು. ಟಿ.ಬಿ. ಕಳಕರಡ್ಡಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

