ಗದಗ

ಪದವೀಧರರ ಸಮಸ್ಯೆ ಪರಿಹಾರಕ್ಕೆ ನೀರಲಕೇರಿ ಬೆಂಬಲಿಸಿ: ಸಲೀಂ

Published On :

ಗದಗ: ನಿರುದ್ಯೋಗಿ ಪದವೀಧರರ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಅಭ್ಯರ್ಥಿ ನೀರಲಕೇರಿ ಅವರನ್ನು ಮತ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸಚೇತಕ ಸಲೀಂ ಅಹ್ಮದ ಮನವಿ ಮಾಡಿದರು.
ಅವರು ಮಂಗಳವಾರ ನಗರದ ವಿವಿಧೆಡೆ ಪಶ್ಚಿಮ ಪದವೀಧರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀರಲಕೇರಿ ಪರ ಪ್ರಚಾರ ನಡೆಸಿದ ನಂತರ ನಗರದ ಅಬ್ದುಲ್ ಕಲಾಂ ಕಾಲೇಜಿನಲ್ಲಿ ನಡೆಸಲಾದ ಪ್ರಚಾರಾರ್ಥ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ತಮ್ಮನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ನೀಡಿ ಬೆಂಬಲಿಸಿದ ಮತದಾರ ಬಾಂಧವರಿಗೆ ಕೃತಜ್ಞತೆ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಪಕ್ಷವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಪದವೀಧರರ ಸಮಸ್ಯೆ ಬಗೆಹರಿಸಲು ಸಹಾಯಕವಾಗುತ್ತದೆ. ಹೀಗಾಗಿ ನೀರಲಕೇರಿ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಮಾಜಿ ಶಾಸಕ ಡಿ.ಆರ್. ಪಾಟೀಲ, ಗದಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ದಂಡಿನ, ಅಧ್ಯಕ್ಷತೆ ವಹಿಸಿದ್ದ ಅಬ್ದುಲ್ ಕಲಾಮ ಬಿಸಿಎ ಕಾಲೇಜಿನ ಚೇರ್‌ಮನ್ ಬಿ.ಕೆ. ಖಾಜಿ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ನಿಸಾರಅಹ್ಮದ ಖಾಜಿ, ಕಾಂಗ್ರೆಸ್ ಶಹರ ಅಧ್ಯಕ್ಷ ಗುರಣ್ಣ ಬಳಗಾನೂರ, ಜಾವೇದ ಸುಂಕದ, ಪ್ರಭು ಬುರಬುರೆ, ಕೆ.ಎಂ. ಕೊಪ್ಪಳ, ಇಸ್ಮಾಯಿಲ್ ಮುಲ್ಲಾ, ಮುನ್ನಾ ಮುಲ್ಲಾ, ವಿ.ಎಲ್. ನಾಡಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.