ಹೃದಯಾಘಾತದಿಂದ ಪೇದೆ ಸಾವು: ನಮನ
ಲಕ್ಷ್ಮೇಶ್ವರ: ಗದಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಶಿವರೆಡ್ಡಿ ಸೋಮರೆಡ್ಡಿ (37) ಹೃದಯಾಘಾತದಿಂದ ಮೃತಪಟ್ಟ ಘಟನೆ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ. ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ತ್ವೇಷಮಯ ವಾತಾವರಣವಿದ್ದ ಕಾರಣ ಬಂದೋಬಸ್ತ್ಗಾಗಿ ಗದಗ ಜಿಲ್ಲಾ ಸಶಸ್ತ್ರ ಮೀಸಲು ತುಕಡಿಯನ್ನು ಕರ್ತವ್ಯದ ಮೇಲೆ ನಿಯೋಜಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟ ಪೇದೆ ಇದೆ ತುಕಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮರೆಡ್ಡಿಯು ಮಂಗಳವಾರ ಬೆಳಗ್ಗೆ ಎದ್ದು ಸ್ನಾನ ಮಾಡಿ ತಿಂಡಿ ತಿನ್ನಲು ಹೋಗುತ್ತಿರುವಾಗ ಪಟ್ಟಣದ ಸೋಮೇಶ್ವರ ಪಾದಗಟ್ಟೆ ಹತ್ತಿರ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನ ಸ್ನೇಹಿತರು ಸಮೀಪದ ಮಲ್ಲಾಡ ನರ್ಸಿಂಗ್ ಹೋಂಗೆ ಕರೆದೊಯ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎನ್ನುವಷ್ಟರಲ್ಲಿ ಪೇದೆ ಮೃತಪಟ್ಟಿರುವ ವಿಷಯವನ್ನು ವೈದ್ಯರು ದೃಢಪಡಿಸಿದರು. ಮೃತ ಪೇದೆಯು ಗದಗ ತಾಲೂಕಿನ ಹರ್ತಿ ಗ್ರಾಮದವನು ಎಂದು ತಿಳಿದು ಬಂದಿದ್ದು, ಮೃತನಿಗೆ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪೇದೆ ಮೃತಪಟ್ಟ ಸುದ್ದಿ ತಿಳಿದ ತಕ್ಷಣ ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ್, ಜಿ.ಎಸ್. ಗಡ್ಡದೇವರಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಲಕೃಷ್ಣ ಕೆ.ಟಿ, ಡಿವೈಎಸ್ಪಿ ವಿಜಯ ಡಂಬಳ, ಸಿಪಿಐ ಶ್ರೀನಿವಾಸ ಮೇಟಿ, ಪಿಎಸ್ಐ ವಿಕಾಶ ಲಮಾಣಿ ಪುಷ್ಪಗುಚ್ಚವಿರಿಸಿ ಮೃತರಿಗೆ ನಮನ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

