ನಾಳೆ ಸಿಎಂ ಮನೆ ಮುಂದೆ ಧರಣಿ
ಮುಂಡರಗಿ: ರಾಜ್ಯ ಸರ್ಕಾರ ಎಸ್ಎಪಿ ಕಾಯ್ದೆ ಪ್ರಕಾರ 2013-14ನೇ ಸಾಲಿಗೆ ಕಬ್ಬು ದರವನ್ನು ಟನ್ಗೆ ರು. 2,500ಗೆ ನಿಗದಿಪಡಿಸಿದ್ದು, 2013ರ ನವೆಂಬರ್ 23ಕ್ಕೆ ಸರ್ಕಾರ ಆದೇಶಿಸಿದೆ. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಇದುವರೆಗೂ ರೈತರಿಗೆ ಆ ಹಣ ನೀಡಿಲ್ಲ. ಇದೀಗ ರಾಜ್ಯದ ಒಟ್ಟು ಕಬ್ಬು ಬೆಳೆಗಾರರಿಗೆ ರು. 3,500 ಕೋಟಿ ಕಾರ್ಖಾನೆ ಮಾಲೀಕರಿಂದ ರೈತರಿಗೆ ಬರಬೇಕಾಗಿದ್ದು, ಅದನ್ನು ನೀಡುವಂತೆ ಒತ್ತಾಯಿಸಿ ಜೂ. 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆ ಮುಂದೆ ರಾಜ್ಯದ ಎಲ್ಲ ಕಬ್ಬು ಬೆಳೆಗಾರ ರೈತರೊಂದಿಗೆ ಧರಣಿ ನಡೆಸುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ ಹೇಳಿದರು.
ಬುಧವಾರ ಮುಂಡರಗಿ ಪಟ್ಟಣದಲ್ಲಿ ವಿಜಯನಗರ ಸಕ್ಕರೆ ಕಾರ್ಖಾನೆ ವ್ಯಾಪ್ತಿಗೆ ಬರುವ ಕಬ್ಬು ಬೆಳೆಗಾರ ರೈತರ ಸಮಾವೇಶದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ತಾವು ಈಗಾಗಲೇ ಅನೇಕ ಬಾರಿ ಸರ್ಕಾರಕ್ಕೆ ಒತ್ತಾಯಿಸುತ್ತ ಬಂದಿದ್ದರೂ ಸರ್ಕಾರದಿಂದ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮುಖ್ಯಮಂತ್ರಿ ಮನೆ ಎದುರು ಧರಣಿ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ ಸುಮಾರು 60 ಸಕ್ಕರೆ ಕಾರ್ಖಾನೆಗಳಲ್ಲಿ ಕೇವಲ 3ರಿಂದ 4 ಕಾರ್ಖಾನೆಗಳು ರೈತರಿಗೆ ಹಣ ಪಾವತಿಸಿರುವುದು ಬಿಟ್ಟರೆ ಬೇರ್ಯಾವ ಕಾರ್ಖಾನೆಗಳು ರೈತರಿಗೆ ಹಣ ಪಾವತಿಸಿಲ್ಲ. ಬೆಳಗಾವಿಯಲ್ಲಿ ಕಬ್ಬು ಬೆಳೆಗಾರ ರೈತ ಅರಬಾಳ ಆತ್ಮಹತ್ಯೆ ಮಾಡಿಕೊಂಡ ಸಂದರ್ಭ ಪ್ರತಿ ತಿಂಗಳಿಗೆ ರು. 100 ಸಹಾಯಧನ ನೀಡುವುದಾಗಿ ತಿಳಿಸಿದ್ದ ಸರ್ಕಾರ 6 ತಿಂಗಳಿಂದ ಆ ಹಣವನ್ನೂ ಕಬ್ಬು ಬೆಳೆಗಾರರಿಗೆ ಪಾವತಿಸಿಲ್ಲ. ಆದರೂ ಒಟ್ಟು ರು. 350 ಕೋಟಿ ರೈತರಿಗೆ ನೀಡಬೇಕಾಗಿದೆ ಎಂದು ಶಾಂತಕುಮಾರ ತಿಳಿಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಪಟೇಲ, ವಿಠಲ್ ಗಮಾಚಾರಿ, ವೀರನಗೌಡ ಪಾಟೀಲ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

