ಗದಗ

ಲಕ್ಷ್ಮೇಶ್ವರ: ಶಾಂತಿಯುತ ಮತದಾನ

Published On :

ಲಕ್ಷ್ಮೇಶ್ವರ: ವಿಧಾನ ಪರಿಷತ್ತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶಿರಹಟ್ಟಿ ತಾಲೂಕಿನಲ್ಲಿ 3 ಕಡೆಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯಲಾಗಿತ್ತು. ಅವುಗಳಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಮತ್ತು ಬೆಳ್ಳಟ್ಟಿಯಲ್ಲಿ ಪದವೀಧರರು ಮತ ಚಲಾಯಿಸಿದ್ದು ವಿಶೇಷವಾಗಿತ್ತು.
ಜಿಪಂನ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ ಪಟ್ಟಣದ ಪುರಸಭೆಯಲ್ಲಿ ಮತ ಚಲಾಯಿಸಿದರು. ಚೆಂದನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಟಿ. ಈಶ್ವರ ಅವರು ತಮ್ಮ ಹಕ್ಕನ್ನು ಚಲಾಯಿಸಿದರು. ಲಕ್ಷ್ಮೇಶ್ವರ ಹೋಬಳಿಯಲ್ಲಿ ಸುಮಾರು 1300ಕ್ಕೂ ಹೆಚ್ಚು ಮತದಾರರಿದ್ದು, ಅದರಲ್ಲಿ 846 ಪದವೀಧರರು ಮತ ಹಾಕಿದರು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಅದೇ ರೀತಿ ಬೆಳ್ಳಟ್ಟಿ ವಿಭಾಗದಲ್ಲಿ 298 ಮತಗಳು ಚಲಾವಣೆಯಾಗಿವೆ ಎಂದು ತಿಳಿದು ಬಂದಿದೆ. ಒಟ್ಟಾರೆ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.