ಪಿಯುಸಿ ಪಠ್ಯಪುಸ್ತಕ ಶೀಘ್ರ ವಿತರಿಸಿ: ಪ್ರತಿಭಟನೆ
ಗದಗ: ರಾಜ್ಯ ಸರ್ಕಾರ ಪಿಯುಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ತಕ್ಷಣ ವಿತರಿಸುವಂತೆ ಆಗ್ರಹಿಸಿ ಎಸ್ಎಫ್ಐ ಕೆವಿಎಸ್ಆರ್ ಕಾಲೇಜು ಘಟಕ, ಕೆವಿಎಸ್ಆರ್ ಕಾಲೇಜು ಆವರಣದಿಂದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮುಖಾಂತರ ಹಾತಲಗೇರಿ ನಾಕಾದಲ್ಲಿ ಮಾನವ ಸರಪಳಿ ರಚಿಸುವ ಮೂಲಕ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಉಪಾಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ಸರ್ಕಾರ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಆಧಿಕಾರಕ್ಕೆ ಬಂದು ವರ್ಷವಾದರೂ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಪಡಿಸಿಲ್ಲ. ಪಠ್ಯಪುಸ್ತಕ ದೊರೆಯದಿದ್ದುದರಿಂದ ಶಿಕ್ಷಣ ಕಲಿಯುವುದು ಹೇಗೆ ಎಂದು ಆರೋಪಿಸಿದರು. ಶಿವಾನಂದ ಬೋಸ್ಲೆ, ಶಿವು ಚವ್ಹಾಣ ಮಾತನಾಡಿದರು. ಶಿವು ಪೂಜಾರ. ಸುರೇಶ, ಮಂಜು, ಕನಕಪ್ಪ, ಮಂಜುನಾಥ ಕುಬೇರ, ಸಂತೋಷ ಯಮನೂರ, ಚೇತನಕುಮಾರ, ಸಕ್ರಪ್ಪ ಮಾಳೋತ್ತರ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

