ಗದಗ

ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಜಿಲ್ಲಾ ಘಟಕದ ಸಭೆ ಇಂದು

Published On :

ಗದಗ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಜಿಲ್ಲಾ ಘಟಕ ಗದಗದ ಅಡಿಯಲ್ಲಿ ಎಂ. ಬಸಪ್ಪ ಅಧ್ಯಕ್ಷತೆಯಲ್ಲಿ ಜೂ. 22ರಂದು ಬೆಳಗ್ಗೆ 10ಕ್ಕೆ ನಗರದ ಕುಮಾರೇಶ್ವರ ಧಾರ್ಮಿಕ ಪಾಠಶಾಲೆ(ಕೆ.ಎಸ್.ಆರ್.ಟಿ.ಸಿ. ಡಿಪೊ ಹಿಂದುಗಡೆ) ದಲ್ಲಿ ಪೂರ್ಣಪ್ರಮಾಣದಲ್ಲಿ ಗದಗ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಹಾಗೂ ಸದಸ್ಯರನ್ನು ಆಯ್ಕೆ ಮಾಡಲು ಜಿಲ್ಲಾ ಎಲ್ಲಾ ತಾಲೂಕುಗಳ ಅಧ್ಯಕ್ಷರುಗಳನ್ನು ಹಾಗೂ ಕಾರ್ಯದರ್ಶಿಗಳನ್ನು ಆಹ್ವಾನಿಸಲಾಗಿದ್ದು, ಈ ದಿಶೆಯಲ್ಲಿ ಜಿಲ್ಲೆಯಲ್ಲಿ ಬರುವ ಗದಗ ಶಹರ ಗದಗ ಗ್ರಾಮೀಣ, ರೋಣ, ನರಗುಂದ, ಮುಂಡರಗಿ, ಹಾಗೂ ಶಿರಹಟ್ಟಿ ತಾಲೂಕುಗಳ ಅಧ್ಯಕ್ಷರುಗಳು ತಮ್ಮ ತಾಲೂಕುಗಳಿಂದ ಜಿಲ್ಲಾ ಸಮಿತಿಗೆ ನೇಮಕಾತಿ ಮಾಡಲು ಅಂದರೆ ಉಪಾಧ್ಯಕ್ಷರು, ಸಹಕಾರ್ಯದರ್ಶಿ 1 ಹಾಗೂ 3 ಅಥವಾ ನಾಲ್ಕು ಸದಸ್ಯರ ಯಾದಿಯನ್ನು ಸಭೆಗೆ ತರಬೇಕು. ಈ ಸಭೆಯಲ್ಲಿ ಸರ್ವರ ಒಪ್ಪಿಗೆ ಪಡೆದು ಸಮಾಜದ ಕಾರ್ಯಗಳಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವುದು. ಕಾರಣ ಸರ್ವ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಶಹರ ಘಟಕದ ಅಧ್ಯಕ್ಷ ಎಂ.ಎಸ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.