ಗದಗ

ಆಧುನಿಕ ಬೇಸಾಯ ಅಗತ್ಯ: ಡಾ. ಹಲಗಲಿಮಠ

Published On :

ಲಕ್ಷ್ಮೇಶ್ವರ: ರೈತರು ಆಧುನಿಕ ಮತ್ತು ವೈಜ್ಞಾನಿಕ ಬೇಸಾಯ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚಿನ ಬೆಳೆಯನ್ನು ಬೆಳೆದು, ಲಾಭ ಮಾಡಿಕೊಳ್ಳಬಹುದಾಗಿದೆ ಎಂದು ಧಾರವಾಡದ ಕೃಷಿ ವಿವಿಯ ಬೇಸಾಯ ತಜ್ಞ ಡಾ. ಹಲಗಲಿಮಠ ಹೇಳಿದರು. ಸಮಿಪದ ಶಿಗ್ಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೀಜೋಪಚಾರ ಕ್ರಮಗಳು ಹಾಗೂ ಕೀಟ, ರೋಗ ಬಾಧೆ ಹತೋಟಿ ಕ್ರಮಗಳ ಕುರಿತ ಪ್ರಾತ್ಯಕ್ಷಿಕೆ ಆಂದೋಲನ ಹಾಗೂ ಕಾರ್ಯಾಗಾರದಲ್ಲಿ ಮಾತನಾಡಿದರು. ಕೀಟ ರೋಗ ನಿಯಂತ್ರಣ ತಜ್ಞೆ ಡಾ. ಶಾಲಿನಿ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.  ಬಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿಡಿದರು. ಕೃಷಿ ನಿರ್ದೇಶಕ ಎಸ್.ಬಿ. ಪಾಟೀಲ, ತಾಪಂ ಅಧ್ಯಕ್ಷೆ ಸುನಂದಮ್ಮ ಬಿದರಳ್ಳಿ, ಜಿಪಂ ಸದಸ್ಯೆ ನಿರ್ಮಲಾ ಬರದೂರ, ಗ್ರಾಪಂ ಅಧ್ಯಕ್ಷ ಡಿ.ವೈ. ಹುನಗುಂದ, ಕೆ.ಎ. ನದಾಫ್, ಕೃಷಿಕ ಸಮಾಜದ ಅಧ್ಯಕ್ಷ ಬಸಣ್ಣ ಹಂಜಿ, ಸೋಮು ಲಮಾಣಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.