ಯೋಜನೆ ಸದ್ಬಳಕೆಯಾಗಲಿ: ದೊಡ್ಡಮನಿ
ಶಿರಹಟ್ಟಿ: ಗ್ರಾಮೀಣ ಪ್ರದೇಶದ ಜನತೆ ಆರೋಗ್ಯ ಮತ್ತು ನೆಮ್ಮದಿಯ ಬದುಕು ಸಾಗಿಸಲೆಂದು ರಾಜ್ಯ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದ್ದು, ಅವುಗಳ ಸದ್ಬಳಕೆಗೆ ಜನತೆ ಮುಂದಾಗಬೇಕು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಕರೆ ನೀಡಿದರು.
ಭಾನುವಾರ ತಾಲೂಕಿನ ಮಾಗಡಿ ಗ್ರಾಮದಿಂದ ಯಳವತ್ತಿ ಮಾರ್ಗವಾಗಿ ಸಂಶಿಗೆ ಸಂಪರ್ಕ ಕಲ್ಪಿಸುವ 2 ಕಿ.ಮೀ. ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ರೀತಿಯ ಮೂಲ ಸೌಲಭ್ಯ ಕಲ್ಪಿಸುವ ಜತೆಗೆ ಅಭಿವೃದ್ಧಿ ಕಾರ್ಯಕ್ರಮ ಸರ್ಕಾರ ಹಾಕಿಕೊಂಡಿದ್ದು, ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಾಗಡಿ-ಯಳವತ್ತಿ ರಸ್ತೆ ರು. 1 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ. ರು. 55 ಕೋಟಿ ವೆಚ್ಚದಲ್ಲಿ ಕಲ್ಮಲಾ-ಶಿಗ್ಗಾಂವಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ರು. 2 ಕೋಟಿ ವೆಚ್ಚದಲ್ಲಿ ಕೊರ್ಲಹಳ್ಳಿ-ಮುಂಡರಗಿ ರಸ್ತೆ, ರು. 4 ಕೋಟಿ ವೆಚ್ಚದಲ್ಲಿ ಮಲ್ಲಿಕಾರ್ಜನಪುರ-ಕೆರಳ್ಳಿ ರಸ್ತೆ, ರು. 2 ಕೋಟಿ ವೆಚ್ಚದಲ್ಲಿ ಲಕ್ಷ್ಮೇಶ್ವರದಿಂದ ದೇವಿಹಾಳ ರಸ್ತೆ ಕಾಮಗಾರಿಗಳು ಭರದಿಂದ ಸಾಗಿವೆ. ಸದ್ಯ 20 ಕಿ.ಮೀ. ರಸ್ತೆ ಸುಧಾರಣೆಗೆ ಸರ್ಕಾರ ಜಿಪಂಗಳಿಗೆ ಅನುದಾನ ನೀಡಿದ್ದು, ಸಾಲದ್ದಕ್ಕೆ ಇನ್ನು 20 ಕಿ.ಮೀ. ರಸ್ತೆ ಸುಧಾರಣೆಗೆ ಹೆಚ್ಚುವರಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದರು.
ಮಾಜಿ ಶಾಸಕ ಎಸ್.ಎನ್. ಪಾಟೀಲ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈ.ಎಸ್. ಪಾಟೀಲ, ಗುತ್ತಿಗೆದಾರ ಎಂ.ಡಿ. ಬಟ್ಟೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಅಂಗಡಿ, ಎಲ್.ಡಿ. ಪಾಟೀಲ ಇತರರಿದ್ದರು.
ಗ್ರಾಮೀಣ ರಸ್ತೆ ನಿರ್ಮಾಣಕ್ಕೆ ಆದ್ಯತೆ: ದೊಡ್ಡಮನಿ
ಲಕ್ಷ್ಮೇಶ್ವರ: ಉತ್ತಮ ರಸ್ತೆಗಳು ದೇಶದ ಅಭಿವೃದ್ಧಿಗೆ ಪೂರಕ. ಗ್ರಾಮೀಣ ಜನರು ಸರಳವಾಗಿ ಸಂಚರಿಸುವುದಕ್ಕೆ ಅನುಕೂಲವಾಗವಂತೆ ನಮ್ಮ ಸರ್ಕಾರ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಿದೆ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು. ಪಟ್ಟಣದ ಮುಳುಗುಂದ ಕ್ರಾಸ್ನಲ್ಲಿ ಸುಮಾರು ರು. 2.5 ಕೋಟಿ ವೆಚ್ಚದಲ್ಲಿ ಲಕ್ಷ್ಮೇಶ್ವರ ಮತ್ತು ದೇವಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮೀಣ ಜನರು ತಮ್ಮ ವ್ಯವಹಾರಗಳಿಗೆ ಪಟ್ಟಣಕ್ಕೆ ಸಂಚಾರ ಮಾಡುವುದು ಅನಿವಾರ್ಯವಾಗಿದೆ. ಪಟ್ಟಣಗಳನ್ನು ಸೇರುವ ಎಲ್ಲ ಪ್ರಮುಖ ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಸುಧಾರಣೆ ಮಾಡುವುದು ಅಗತ್ಯವಾಗಿದೆ ಎಂದರು. ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ತಾಪಂ ಸದಸ್ಯ ಚನ್ನಪ್ಪ ಜಗಲಿ, ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

