ಗದಗ

ರೇಲ್ವೆ ಪ್ರಯಾಣ ದರ ಏರಿಕೆ: ಪ್ರತಿಭಟನೆ

Published On :

ಲಕ್ಷ್ಮೇಶ್ವರ: ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಿಂಗಳಲ್ಲಿ ರೇಲ್ವೆ ಪ್ರಯಾಣ ದರವನ್ನು ಹೆಚ್ಚಳ ಮಾಡುವ ಮೂಲಕ ಬೆಲೆ ಏರಿಕೆ ಬಿಸಿಯನ್ನು ಜನಸಾಮಾನ್ಯರಿಗೆ ಮುಟ್ಟಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಪೂರ್ಣಾಜಿ ಖರಾಟೆ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರು ರೇಲ್ವೆ ಪ್ರಯಾಣ ದರ ಏರಿಕೆ ಖಂಡಿಸಿ ಶಿಗ್ಲಿ ಕ್ರಾಸ್‌ದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಅಬ್ ಕಿ ಬಾರ್ ಮೋದಿ ಸರ್ಕಾರ್ ಎನ್ನುವ ಬಣ್ಣದ ಮಾತುಗಳನ್ನು ಹೇಳುತ್ತ ಜನಸಾಮಾನ್ಯರಿಗೆ ಮಕ್ಮಲ್ ಟೋಪಿ ಹಾಕುವುದನ್ನು ಕಾಂಗ್ರೆಸ್ ಪಕ್ಷವು ಬಲವಾಗಿ ಖಂಡಿಸುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ರೇಲ್ವೆ ಪ್ರಯಾಣ ದರ ಹೆಚ್ಚಳ ಮಾಡುವ ಮೂಲಕ ಎಲ್ಲ ವಸ್ತುಗಳ ಬೆಲೆ ಗಗನದತ್ತ ಮುಖ ಮಾಡುವ ಸೂಚನೆ ತೋರುತ್ತದೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಅದಕ್ಕಾಗಿ ಕೇಂದ್ರ ಸರ್ಕಾರವು ಯಾವುದೇ ಕಾರಣಕ್ಕೂ ಬೆಲೆ ಹೆಚ್ಚಳ ಮಾಡುವ ಕ್ರಮ ಕೈಗೊಳ್ಳಬಾರದು. ಅಲ್ಲದೇ ಹೆಚ್ಚಳ ಮಾಡಿರುವ ಬೆಲೆಯನ್ನು ಶೀಘ್ರವಾಗಿ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ನಂತರ ತಹಸೀಲ್ದಾರ್ ಕೊಟ್ರೇಶ ಗಾಳಿ ಅವರಿಗೆ ಮನವಿ ಸಲ್ಲಿಸಿದರು.
ತಾಪಂ ಸದಸ್ಯ ಚನ್ನಪ್ಪ ಜಗಲಿ, ಜಯಕ್ಕ ಕಳ್ಳಿ, ಫಕ್ಕೀರೇಶ ಮ್ಯಾಟಣ್ಣವರ, ನೀಲಪ್ಪ ಸೆರಸೂರಿ, ಗೋವಿಂದಪ್ಪ ಸೆರಸೂರಿ, ಗಂಗಾಧರ ಮ್ಯಾಗೇರಿ, ದಾದಾಪೀರ ಮುಚ್ಚಾಲೆ, ಕಿರಣ ನವಲೆ, ರಾಜು ಕುಂಬಿ, ಬಸವರಾಜ ಓದಾನವರ, ತಿಪ್ಪಣ್ಣ ಸಂಶಿ, ರಾಮು ಅಡಗಿಮನಿ, ವಿರೂಪಾಕ್ಷಪ್ಪ ಆದಿ, ಮುತ್ತಣ್ಣ ಬಟ್ಟೂರ, ಅಮರೇಶ ತೆಂಬದಮನಿ, ವಿಜಯ ಕುಂಬಿ, ಅಪ್ಜಲ್ ರಿತ್ತಿ, ಕಂದಾಯ ನಿರೀಕ್ಷಕ ಎಫ್.ಎನ್. ಹುಬ್ಬಳ್ಳಿ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.