ಗದಗ

ನಿಂಗಬಸಪ್ಪ ಪ್ಯಾಟಿ ಮುಂಡರಗಿ ತಾಪಂ ಹಂಗಾಮಿ ಅಧ್ಯಕ್ಷ

Published On :

ಮುಂಡರಗಿ: ಇಲ್ಲಿನ ತಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರದ ಅವಧಿ ಜೂ. 22ರಂದು ಕೊನೆಗೊಂಡಿದ್ದು, ಮುಂದಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಾಗುವ ವರೆಗೂ ತಾಪಂ ಸದಸ್ಯ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಿಂಗಬಸಪ್ಪ ಪ್ಯಾಟಿ ಅವರು ತಾಪಂ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಪ್ಯಾಟಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ಈ ಹಿಂದೆ ತಾಪಂ ಅಧ್ಯಕ್ಷರಾಗಿದ್ದ ತಾರಾಬಾಯಿ ಚವ್ಹಾಣ ಹಾಗೂ ಉಪಾಧ್ಯಕ್ಷರಾಗಿದ್ದ ಅಕ್ಕಮಹಾದೇವಿ ಹಾರೋಗೇರಿ ಅವರ ಅಧಿಕಾರದ ಅವಧಿ ಜೂ. 22ರಂದು ಮುಕ್ತಾಯಗೊಂಡಿದೆ. ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ 140 ಪ್ರಕರಣದ 6ನೇ ಉಪಪ್ರಕರಣದ ಅಡಿಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ನಿಂಗಬಸಪ್ಪ ಪ್ಯಾಟಿ ಅಧಿಕಾರ ಪಡೆದುಕೊಂಡರು. ಅಧಿಕಾರ ಪಡೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಾಪಂ ಸರ್ವ ಸದಸ್ಯರ ಹಾಗೂ ಅಧಿಕಾರಿಗಳ ಸಹಕಾರ ಹಾಗೂ ಸಲಹೆಗಳೊಂದಿಗೆ ಉತ್ತಮ ಆಡಳಿತ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು. ತಾಪಂ ಸದಸ್ಯ ಸಿದ್ದನಗೌಡ ಪಾಟೀಲ, ಸದಸ್ಯೆ ಹೇಮಾವತಿ ನಾಯಕ, ಜಗದೀಶ ಹಾರೋಗೇರಿ, ಬಸವರಾಜ ಸಂಗನಾಳ, ಶೇಖರಯ್ಯ ಗುರುವೀನ, ಬಸವರಾಜ ಪುರದ ಇತರರು ಅಭಿನಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.