ಗದಗ

ರೇಲ್ವೆ ಪ್ರಯಾಣ ದರ ಏರಿಕೆಗೆ ಖಂಡನೆ

Published On :

ಗಜೇಂದ್ರಗಡ: ರೇಲ್ವೆ ಪ್ರಯಾಣ ದರ ಏರಿಕೆ ಖಂಡಿಸಿ ಮ ಮಂಗಳವಾರ ಭಾರತ್ ಪ್ರಜಾಸತ್ತಾತ್ಮಕ್ ಯುವಜನ ಫೆಡರೇಶನ್ ಸಂಘಟನೆ ವತಿಯಿಂದ ಸಮೀಪದ ರಾಜೂರ ಗ್ರಾಮದಲ್ಲಿ ಕೇಂದ್ರ ರೇಲ್ವೆ ಸಚಿವ ಡಿ.ವಿ. ಸದಾನಂದಗೌಡ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.
ಸಂಘಟನೆಯ ಮುಖಂಡ ಕಳಕೇಶ ಉಕ್ಕಿಸಲ ಮಾತನಾಡಿ, ಶ್ರೀಸಾಮಾನ್ಯನ ನೆಚ್ಚಿನ ಸಾರಿಗೆಯಾದ ರೇಲ್ವೆ ಪ್ರಯಾಣ ದರ ಏರಿಕೆ ಮಾಡುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಲಿದೆ. ಇದು ದೇಶದ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಬಿಜೆಪಿ ಮುಖಂಡರು ಚುನಾವಣಾ ಪೂರ್ವ ದೇಶದ ಜನರಿಗೆ ಒಳ್ಳೆಯ ದಿನಗಳು ಬರಲಿವೆ ಎಂದು ಹೇಳಿದ್ದರು. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೇಲ್ವೆ ಪ್ರಯಾಣ ದರ ಏರಿಕೆ ಮಾಡುವುದರ ಮೂಲಕ ಜನರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ ಎಂದು ಆರೋಪಿಸಿದರು.
ದೇಶದ ಜನತೆ ಯುಪಿಎ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಬಿಜೆಪಿ ಬೆಂಬಲಿಸಿದ್ದಾರೆ. ಬೆಲೆ ಏರಿಕೆಯಂತಹ ಜನವಿರೋಧಿ ನೀತಿ ಅನುಸರಿಸುತ್ತಿರುವ ಎನ್ಡಿಎ ಸರ್ಕಾರಕ್ಕೂ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಕೂಡಲೇ ಎಚ್ಚೆತ್ತು ದರ ಏರಿಕೆ ಕೈಬಿಟ್ಟು ಜನಪರ ಯೋಜನೆ ರೂಪಿಸಿ ಜನರ ಕಷ್ಟಗಳಿಗೆ ಸ್ಪಂದಿಸಿ ಎಂದು ವಿಶೇಷ ತಹಸೀಲ್ದಾರ್ ಪಿ.ಬಿ. ಮೂಲಿಮನಿ ಅವರಿಗೆ ಮನವಿ ಸಲ್ಲಿಸಿದರು.
ಪೀರು ರಾಠೋಡ, ಬಾಲು ರಾಠೋಡ, ಎಂ.ಬಿ. ಸೋಂಪುರ, ಮೈಬು ಹವಾಲ್ದಾರ, ದಾವಲ ತಾಳಿಕೋಟಿ, ಆರ್.ಕೆ. ಗೊಡೇಕಾರ, ಎಸ್.ಎಫ್. ತೋಟದ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.